ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಚುನಾವಣೆ ಗೆದ್ದ ನಂತರ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಜಗದೀಶ ಶೆಟ್ಟರ್ ಅವರು ಹುಬ್ಬಳ್ಳಿಯ ಆರಾಧ್ಯ ಧೈವ ಸದ್ಗುರು ಸಿದ್ಧಾರೂಢರ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ಶೆಟ್ಟರ್ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದರು.ಇನ್ನೂ ಆರತಿ ಬೆಳಗಿ ಬರಮಾಡಿಕೊಂಡ ಬಿಜೆಪಿ ಕಾರ್ಯಕರ್ತರು, ಶೆಟ್ಟರ್ ಪರವಾಗಿ ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದರು. ಶ್ರೀ ಸದ್ಗುರು ಸಿದ್ದಾರೂಢ ಹಾಗೂ ಶ್ರೀ ಗುರುನಾಥರೂಡ ಗದ್ದುಗೆಗೆ ನಮಸ್ಕರಿಸಿ ಆಶೀರ್ವಾದ ಪಡೆದ ಶೆಟ್ಟರ್ ಜೊತೆಗೆ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಎಲ್ಎಲ್ ಸಿ ಪ್ರದೀಪ್ ಶೆಟ್ಟರ್, ಬಿಜೆಪಿ ಮಹಾನಗರ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಹಾಗೂ ಪ್ರಮುಖ ಮುಖಂಡರು ಸೇರಿದಂತೆ ಕಾರ್ಯಕರ್ತರು ಭಾಗಿಯಾಗಿದ್ದರು.
Check Also
ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!
ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …
bigtvnews | Hubli Dharwad News | Kannada News | Karnataka News Hubli News | News In Hubli | Local news

