Breaking News
Featured Video Play Icon

ಶಾಸಕ ಅರವಿಂದ ಬೆಲ್ಲದ, ಉಪಮೇಯರ್ ಸತೀಶ ಹಾನಗಲ್ ವಿರುದ್ಧ ಎಫ್ ಐ ಆರ್..! F I R

ಹುಬ್ಬಳ್ಳಿ: ಅವರಿಬ್ಬರೂ ಜನಪ್ರತಿನಿಧಿಗಳು, ಒಬ್ಬರು ಒಂದು ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದರೇ ಮತ್ತೊಬ್ಬರು ವಾರ್ಡ್ ಪ್ರತಿನಿಧಿಸಿ ಈಗ ಮಹಾನಗರ ಪಾಲಿಕೆ ಉಪಮೇಯರ್ ಆಗಿದ್ದಾರೆ. ಈಗ ಈ ಇಬ್ಬರೂ ಮೇಲೇ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.. ಕೊಳಚೆ ನಿರ್ಮೂಲನ ಮಂಡಳಿ ನೀಡಿರುವ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅರವಿಂದ ಬೆಲ್ಲದ, ಉಪ ಮೇಯ‌ರ್ ಸತೀಶ ಹಾನಗಲ್‌ ಮತ್ತು ಲಕ್ಷ್ಮಣ ಭೋವಿ ವಿರುದ್ದ ಹಳೇಹುಬ್ಬಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2023 ಡಿ. 30ರಂದು ಪೊಲೀಸ್‌ ಕಮಿಷನ‌ರ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕುಂದು ಕೊರತೆ ಸಭೆ ನಡೆದಿತ್ತು. ಅಂದು ಪರಶುರಾಮ ದಾವಣಗೆರೆ ಅವರು, ಆನಂದನಗರದ ಕೃಷ್ಣಾಕಾಲೊನಿಗೆ ಸಂಬಂಧಪಟ್ಟ ಖಾಲಿ ಜಾಗವನ್ನು ಕೊಳಚೆ ನಿರ್ಮೂಲನ ಮಂಡಳಿ ಅಕ್ರಮವಾಗಿ ಹಕ್ಕುಪತ್ರ ವಿತರಿಸಿದೆ ಎಂದು ದೂರಿ, ಅರ್ಜಿ ಸಲ್ಲಿಸಿದ್ದರು.ಈ ಅರ್ಜಿಯನ್ನು ಹಿಂಪಡೆಯುವಂತೆ ಉಪ ಮೇಯ‌ರ್ ಮೇಯ‌ರ್ ಸತೀಶ ಹಾನಗಲ್ ಹಾಗೂ ಶಾಸಕ ಅರವಿಂದ ಬೆಲ್ಲದ ಕುಮ್ಮಕ್ಕಿನಿಂದ ಲಕ್ಷ್ಮಣ ಭೋವಿ ಅವರು ಅವಾಚ್ಯ ಪದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ. ಆರೋಪಿತರ ಮೇಲೆ ಕ್ರಮಕೈಗೊಳ್ಳಬೇಕು ಎಂದು ಅವರು 4ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ದೂರು ದಾಖಲಿಸಿದ್ದರು. ನ್ಯಾಯಾಲವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿ ಪ್ರಕರಣ ದಾಖಲಾಗಿದೆ.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *