Breaking News

murder case big twist ನಟ ದರ್ಶನ್ ಬಂಧನ..! ಕೇಸ್ ಬಗ್ಗೆ ಪೊಲೀಸ್ ಕಮಿಷನ‌ರ್ ಸ್ಫೋಟಕ ಮಾಹಿತಿ..!

ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಎಂಬಾತನ‌ ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದಾರೆ ಎನ್ನಲಾಗ್ತಿದೆ. ಪವಿತ್ರಾ ಗೌಡಗೆ (Pavitra Gowda) ಅಶ್ಲೀಲವಾಗಿ ಮೆಸೇಜ್ ಮಾಡಿದ್ದ ರೇಣುಕಾಸ್ವಾಮಿ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.ಪೊಲೀಸ್ ಕಮಿಷನರ್ ಹೇಳಿದ್ದೇನು…? ಮೈಸೂರಿನ ಹೋಟೆಲ್​ ನಲ್ಲಿ ನಟ ದರ್ಶನ್ ಅವರನ್ನು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಪೊಲೀಸ್​ ಕಮೀಷನರ್ ಬಿ ದಯಾನಂದ್​ ಅವರು ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಸೇರಿದಂತೆ 10 ಮಂದಿಯನ್ನು ಬಂಧಿಸಿರುವುದಾಗಿ ಹೇಳಿದ್ದಾರೆ. 10 ಮಂದಿಯಲ್ಲಿ ಒಬ್ಬ ಸಿನಿಮಾ ಆಗಿದ್ದು, ಮತ್ತೊಬ್ಬ ಉದ್ಯಮಿಯ ಮಗನಾಗಿದ್ದಾನೆ ಎಂದ್ರು. ತನಿಖೆಗೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡೋದಾಗಿ ಕಮಿಷನರ್ ಹೇಳಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ವರದಿಯಾಗಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರದ ಓರ್ವ ನಟನನ್ನು ವಶಕ್ಕೆ ಪಡೆಯಲಾಗಿದೆ. ಜೂನ್ 9 ರಂದು ಕೇಸ್ ದಾಖಲಾಗಿತ್ತು. ಬೆಂಗಳೂರಿನಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಬಳಿಕ ದೇಹದ ಮೇಲಿನ ಗಾಯಗಳನ್ನು ಗಮನಿಸಿ ಕೊಲೆ ಕೇಸ್ ದಾಖಲಿಸಲಾಗಿತ್ತು ಎಂದು ಕಮಿಷನರ್ ಕೇಸ್​ ಬಗ್ಗೆ ಮಾಹಿತಿ ನೀಡಿದ್ರು.ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್..! ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು.

ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆಯಂತೆ ಕೊನೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.ಚಿತ್ರದುರ್ಗದ ರೇಣುಕಾಸ್ವಾಮಿ!ಅಪೋಲೋ ಮೆಡಿಕಲ್​ನಲ್ಲಿ

ರೇಣುಕಾಸ್ವಾಮಿ ಕೆಲಸ ಮಾಡ್ತಿದ್ದರು. ಶನಿವಾರ ರಾತ್ರಿ ರೇಣುಕಾಸ್ವಾಮಿಯನ್ನು ಕರೆ ತಂದ ಕೆಲವರು ಬೆಂಗಳೂರಿನಲ್ಲಿ ದರ್ಶನ ಮುಂದೆಯೇ ಆತನನ್ನು ಚೆನ್ನಾಗಿ ಥಳಿಸಿದ್ದಾರೆ. ದರ್ಶನ ಸಹ ಹಲ್ಲೆ ಮಾಡಿದ್ದಾರೆ ಎಂದು ವರದಿ ಆಗಿದೆ. ಬಳಿಕ ದರ್ಶನ್ ಮುಂದೆ ಮೂವರು ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿ ಬಳಿಕ ಚರಂಡಿಗೆ ಬಿಸಾಡಿದ್ದಾರೆ ಎಂದು ವರದಿಯಾಗಿದೆ. ಮಗನ ಸಾವಿನ ಸುದ್ದಿ ತಿಳಿದು ರೇಣುಕಾ ಸ್ವಾಮಿ ಪೋಷಕರು ಬೆಂಗಳೂರಿಗೆ ಆಗಮಿಸಿದ್ದು, ಠಾಣೆ ಮುಂದೆ ಕಣ್ಣೀರು ಹಾಕ್ತಿದ್ದಾರೆ.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *