Breaking News

ಬಕ್ರೀದ್ ಹಬ್ಬದ ಪ್ರಯುಕ್ತ ಸೌಹಾರ್ದ ಸಭೆ: ಡಿಸಿಪಿ ನೇತೃತ್ವದಲ್ಲಿ ಶಾಂತಿ ಕಾಪಾಡಲು ಸೂಚನೆ..!

ಹುಬ್ಬಳ್ಳಿ: ಇಸ್ಲಾಂ ಧರ್ಮದ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಬಕ್ರೀದ್ ಹಬ್ಬದ ಪ್ರಯುಕ್ತವಾಗಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಸೌಹಾರ್ದತೆ ಸಭೆ ಹಾಗೂ ಸಾರ್ವಜನಿಕ ಸಂಪರ್ಕ ಸಭೆಯನ್ನು ನಡೆಸಲಾಯಿತು. ಕಾರ್ಯಕ್ರಮಕ್ಕೆ ಕಾನೂನು ಸುವ್ಯವಸ್ಥೆ ಡಿಸಿಪಿ ಕುಶಾಲ್ ಚೌಕ್ಷೆ ಚಾಲನೆ ನೀಡಿದರು… ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಸೂಚನೆ ನೀಡಲಾಗಿದ್ದು, ಶಾಂತಿಗೆ ದಕ್ಕೆ ತರುವಂತಹ ಹಾಗೂ ಕಾನೂನು ಬಾಹಿರ ಕೃತ್ಯಗಳಿಗೆ ಪ್ರಚೋದನೆ ನೀಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮವನ್ನು ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಇನ್ನೂ ಸಭೆಯಲ್ಲಿ ಎಸಿಪಿ ಉಮೇಶ್ ಚಿಕ್ಕಮಠ, ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರ, ಯಾಸಿನ್ ಹಿಂಡಸಗೇರಿ, ಬಸವರಾಜ್ ಚಿಕ್ಕಮಠ, ಶಿವಾನಂದಪ್ಪ ಹೊಸೂರ ಹಾಗೂ ಪಾಲಿಕೆ ಸದಸ್ಯರಾದ ಎಂ.ಎಂ.ಭದ್ರಾಪೂರ, ಇಮ್ರಾನ್ ಎಲಿಗಾರ್ ಸೇರಿದಂತೆ ಇತರರು ಇದ್ದರು.

Share News

About Shaikh BigTv

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *