Breaking News
Featured Video Play Icon

ಪತ್ತೆ ಮಾಡಿದ 315 ಮೊಬೈಲ್ ಹಸ್ತಾಂತರ:ಪೊಲೀಸ್ ಕಮೀಷನರೇಟ್ ಮಹತ್ವದ ಕಾರ್ಯ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಬರುವ ಪ್ರದೇಶದಲ್ಲಿ ಮೊಬೈಲ್ ಕಳೆದುಕೊಂಡ ಸಾರ್ವಜನಿಕರ ಮೊಬೈಲ್ ಪತ್ತೆ ಮಾಡಿ ಹಸ್ತಾಂತರ ಮಾಡುವ ಕಾರ್ಯಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಸುಮಾರು 315 ಮೊಬೈಲ್ ಹಸ್ತಾಂತರ ಮಾಡಲಾಯಿತು.

ಮೊಬೈಲ್ ಕಳೆದುಕೊಂಡ ಮಾಲೀಕರಿಗೆ ಮೊಬೈಲ್ ಹಸ್ತಾಂತರ ಕಾರ್ಯಕ್ರಮವನ್ನು ಹುಬ್ಬಳ್ಳಿ ಸವಾಯಿ ಗಂಧರ್ವ ಹಾಲ್‌ನಲ್ಲಿ ಆಯೋಜಿಸಲಾಗಿದ್ದು, ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ನೇತೃತ್ವದಲ್ಲಿ ಹಸ್ತಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು..315 ಮೊಬೈಲ್ ಹಸ್ತಾಂತರ ಮಾಡಿದ ಪೊಲೀಸ್ ಅಧಿಕಾರಿಗಳು, CEIR PORTAL ಮೊಬೈಲ್ ಪತ್ತೆ ಹಚ್ಚಿದ ಪೊಲೀಸ್ ಸಿಬ್ಬಂದಿ ಹುಧಾ ಪೊಲೀಸ್ ಕಮೀಷನರ್, ಸಾರ್ವಜನಿಕರಿಗೆ ಕಾರ್ಯಕ್ರಮದಲ್ಲಿಯೇ ವಿತರಣೆ ಮಾಡಲಾಯಿತು. ಇನ್ನೂ ಕಾರ್ಯಕ್ರಮದಲ್ಲಿ ಮಾತನಾಡಿದ ಪೊಲೀಸ್ ಆಯುಕ್ತರು, ಯಾರೇ ಆಗಲಿ, ಯಾವುದೇ ಸಂದರ್ಭದಲ್ಲಿ ಮೊಬೈಲ್ ಕಳೆದುಕೊಂಡರೇ ಕೂಡಲೇ ‌1930 ಹೆಲ್ಪ್ ಲೈನ್ ಗೆ ಕರೆ ಮಾಡಿ ಮಾಹಿತಿ ನೀಡಬೇಕು. ಈ ಬಗ್ಗೆ ಜನರು ಕೂಡ ಸಾಕಷ್ಟು ಜಾಗೃತರಾಗಿರಬೇಕು ಎಂದು ಅವರು ಮನವಿ ಮಾಡಿದರು.

ರೇಣುಕಾ ಸುಕುಮಾರ್ ಪೊಲೀಸ್ ಆಯುಕ್ತರು

ಒಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಮೊಬೈಲ್ ಕಳೆದುಕೊಂಡ ಸಾರ್ವಜನಿಕರಿಗೆ ಪತ್ತೆ ಮಾಡಿದ ಮೊಬೈಲ್ ಹಸ್ತಾಂತರ ಮಾಡಿದ್ದು, ನಿಜಕ್ಕೂ ಆತಂಕಗೊಂಡಿದ್ದ ಸಾರ್ವಜನಿಕರಲ್ಲಿ ಭರವಸೆ ಮೂಡಿದ್ದು, ಪೊಲೀಸ್ ಇಲಾಖೆ ಅಂದರೇ ಭಯವಲ್ಲ ಭರವಸೆ ಎಂಬುವುದನ್ನು ಸಾಕ್ಷಿಕರಿಸಿದೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *