ಹುಬ್ಬಳ್ಳಿ: ಸುಮಾರು ಇಪ್ಪತ್ತು ವರ್ಷಗಳಿಂದ ಹತ್ತಾರು ಕುಟುಂಬಕ್ಕೆ ಆಶ್ರಯ ತಾಣವಾಗಿದ್ದ ಅಮರಗೋಳ ಆಶ್ರಯ ಕಾಲೋನಿಯಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿಗಳು ಸದ್ದು, ಮಾಡಿವೆ. ಜೆಸಿಬಿ ಆಗಮಿಸುತ್ತಿದ್ದಂತೆಯೆ ಇಲ್ಲಿನ ನಿವಾಸಿಗಳು ಆತಂಕಗೊಂಡಿದ್ದಾರೆ… ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಬೆಳ್ಳಂಬೆಳಿಗ್ಗೆ ಅಮರಗೋಳದಲ್ಲಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಯಾವುದೇ ರೀತಿಯ ಸೂಚನೆ ನೀಡದೇ, ನೋಟಿಸ್ ಕೂಡ ಕೊಡದೇ ಏಕಾಏಕಿ ತೆರವು ಮಾಡಿದರೇ ಎಲ್ಲಿ ಹೋಗುವುದು ಎಂಬುವಂತ ಅಳಲನ್ನು ಇಲ್ಲಿನ ಜನರು ತೋಡಿಕೊಂಡಿದ್ದಾರೆ. ಸುಮಾರು ಒಂಬತ್ತು ಮನೆಗಳಿದ್ದು, ಈಗಾಗಲೇ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.ಇನ್ನೂ ಈ ಬಗ್ಗೆ ಸ್ಥಳೀಯರು ಶಾಸಕ ಅರವಿಂದ ಬೆಲ್ಲದ ಅವರಿಗೆ ಮಾಹಿತಿ ನೀಡಿದ್ದು, ಆಶ್ರಯಕ್ಕೆ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ಯಾವುದೇ ನೋಟಿಸ್ ನೀಡಿದೇ ತೆರವು ಮಾಡುತ್ತಿರುವುದಾಗಿ ನಿವಾಸಿಗಳು ಆರೋಪಿಸಿದ್ದು, ಪಾಲಿಕೆ ಆಯುಕ್ತರು ಸ್ಪಷ್ಟನೆ ನೀಡಬೇಕಿದೆ.
Check Also
68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!
ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …
bigtvnews | Hubli Dharwad News | Kannada News | Karnataka News Hubli News | News In Hubli | Local news

