Breaking News
Featured Video Play Icon

ಇಂಧನ ಬೆಲೆ ಏರಿಕೆ: ರಸ್ತೆ ತಡೆದು ಬಿಜೆಪಿ ಪ್ರತಿಭಟನೆ..!

ತುಟಿ ಪಿಟಕ್ ಅನ್ನದ ನಾಯಕರು ರೋಡಿಗಿಳಿದ ಕಾರ್ಯಕರ್ತರು..!!! ಅಂದು ದೇಶಕ್ಕಾಗಿ ಪೆಟ್ರೋಲ್ ದರ ಹೆಚ್ಚಾದರೂ ಪರವಾಗಿಲ್ಲ ನಾವು ಮೋದಿಗಾಗಿ ಸಹಿಸಿಕೊಳ್ಳುತ್ತೇವೆ ಅಂದವರು..!!!! ಇಂದು ರಾಜ್ಯ ಸರ್ಕಾರದ ವಿರುದ್ಧ ಹೋರಾಟ..??? ದ್ವಂದ್ವ ನೀತಿಯಲ್ಲಿ ಹೋರಾಟಗಾರ ಹಾದಿ!!!!

ಹುಬ್ಬಳ್ಳಿ: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಹಿಂಪಡೆಯಬೇಕು ಎಂದು ಒತ್ತಾಯಿಸಿ ಬಿಜೆಪಿ ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವತಿಯಿಂದ ನಗರದಲ್ಲಿಂದು ಪಿಬಿ ರಸ್ತೆಯ ನ್ಯೂ ಇಂಗ್ಲಿಷ್ ಸ್ಕೂಲ್ ವೃತ್ತದ ಬಳಿ ರಸ್ತೆ ತಡೆ ಮಾಡಿ, ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರತಿಕೃತಿ ದಹಿಸಿ, ಇಂಧನ ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ಸಹಜವಾಗಿ ಸಾಗಾಣಿಕೆ ವೆಚ್ಚ ಹೆಚ್ಚಾಗಲಿದೆ. ಇದರಿಂದಾಗಿ ಅಕ್ಕಿ, ಬೇಳೆ, ಅಡುಗೆ ಎಣ್ಣೆ, ತರಕಾರಿ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಇನ್ನೂ ದುಬಾರಿಯಾಗಲಿದೆ. ಇದರಿಂದ ಬಡವರು ಬದುಕು ದುಸ್ತರವಾಗಲಿದೆ. ಕೂಡಲೇ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳವನ್ನು ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.

Share News

About Shaikh BigTv

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *