ಹುಬ್ಬಳ್ಳಿ: ವಿಕಲಚೇತನರು ಬಳಸುವ ಬೈಕ್ ಹಾಗೂ ಮೊಬೈಲ್ ಕಳ್ಳತನ ಮಾಡಿದ ಖದೀಮನನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗೋಕುಲ್ ರೋಡ್ ಪೊಲೀಸ್ ಠಾಣೆ ಪೋಲೀಸರು ಯಶಸ್ವಿಯಾಗಿದ್ದಾರೆ.ಪೊಲೀಸ್ ಕಾರ್ಯಾಚರಣೆ ವೇಳೆ ಮೊಬೈಲ್ ಮತ್ತು ಬೈಕ್ ಕಳ್ಳನ ಬಂಧಿಸಲಾಗಿದೆ. ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿ ನಡೆದ ಘಟನೆಯಲ್ಲಿ ಸುನೀಲ ಕುಮಾರ ಕರ್ಜಗಿ ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ ಬೈಕ್ ಹಾಗೂ ನಾಲ್ಕು ಮೊಬೈಲ್ ವಶಕ್ಕೆ ಪಡೆಯಲಾಗಿದೆ.ವಿಕಲಚೇತನರು ಬಳಸುವ ಬೈಕ್ ಹಾಗೂ ಮೊಬೈಲ್ ಕಳ್ಳತನ ಮಾಡಿಕೊಂಡು ಹೋಗುತ್ತಿದ್ದಾಗ ಪೊಲೀಸರು ಸೂಕ್ತ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

