Breaking News
Featured Video Play Icon

ಆಕಾಶ ಮಠಪತಿ ಕೊಲೆ ಪ್ರಕರಣ: ಸರ್ಕಾರಕ್ಕೆ ಆಟೋ ಚಾಲಕರ ಎಚ್ಚರಿಕೆ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಒಂದಾದ ಮೇಲೆ ಒಂದರಂತೆ ಕೊಲೆ ನಡೆಯುತ್ತಲೇ ಇದೆ. ಹೀಗಿದ್ದರೂ ಸರ್ಕಾರ ಮಾತ್ರ ಕಟ್ಟುನಿಟ್ಟಿನ ಕ್ರಮವನ್ನು ಜರುಗಿಸುತ್ತಿಲ್ಲ ಎಂದು ಆಟೋ ಚಾಲಕರ ಸಂಘದ ಅಧ್ಯಕ್ಷ ಹನುಮಂತಪ್ಪ ಕೋಳಿವಾಡ ಆಕ್ರೋಶ ವ್ಯಕ್ತಪಡಿಸಿದರು.ಆಕಾಶ ಮಠಪತಿ ಕೊಲೆಯ ಹಿನ್ನೆಲೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಶೇಖರಯ್ಯ ಮಠಪತಿ ಸಾಕಷ್ಟು ಸಾರ್ವಜನಿಕರ ಸಮಸ್ಯೆಗಳ ವಿರುದ್ಧ ಹೋರಾಟ ಮಾಡಿದ್ದಾರೆ. ಆದರೆ ಇಂದು ಅವರ ಮಗನನ್ನು ಕಳೆದುಕೊಂಡಿದ್ದಾರೆ. ಅವರಿಗೆ ಬಹಳ ಅನ್ಯಾಯವಾಗಿದೆ. ಈ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಬೇಕಿದೆ ಎಂದರು.ಅವಳಿನಗರದ ಕೊಲೆ ಪ್ರಕರಣಗಳ ಬಗ್ಗೆ ಸರ್ಕಾರ ಸಾಕಷ್ಟು ನಿರ್ಲಕ್ಷ್ಯ ವಹಿಸುತ್ತಿದೆ. ಒಂದು ವೇಳೆ ಈ ಕುಟುಂಬಕ್ಕೆ ನ್ಯಾಯ ಸಿಗದೇ ಹೋದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *