ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ವ್ಯಕ್ತಿಯೊಬ್ಬ ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ಕಳುಹಿಸಿದ ಕುರಿತು ಗೋಕುಲರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಿರ್ದೇಶಕ ರೂಪೇಶಕುಮಾರ ಶ್ರೀಪಾದ

ಅವರ ಕಚೇರಿ ಮೇಲ್ ಐಡಿಗೆ ಜೂನ್ 25ರಂದು ಸಂಜೆ 6.30ವೇಳೆ LongLivepalestine@dnmx.org ಮೇಲ್ ಐಡಿಯಿಂದ ಜೀವ ಬೆದರಿಕೆ ಸಂದೇಶ ಬಂದಿದೆ. ‘ನಾವು ನಿಮ್ಮನ್ನು ನಾಶ ಮಾಡುತ್ತೇವೆ. ಬೆಂಕಿಯಲ್ಲಿ ಎಸೆಯುತ್ತೇವೆ. ಉಸಿರುಗಟ್ಟಿ ಸಾಯುತ್ತೀರ. ನೀವು ಮಾಡಿದ ಎಲ್ಲ ಕೆಟ್ಟ

ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರ’ ಎಂದು ಬೆದರಿಸಿ ಸಂದೇಶ ಕಳುಹಿಸಲಾಗಿದೆ.ಟರ್ಮಿನಲ್ ಉಸ್ತುವಾರಿ ಪ್ರತಾಪ ಅವರಿಗೆ ಸಂದೇಶ ತೋರಿಸಿದ ರೂಪೇಶಕುಮಾರ ಅವರು, ಸಿಎಎಸ್‌ಒ, ಐಬಿ, ಬಿಡಿಡಿಎಸ್ ಮತ್ತು ಬಾಂಬ್ ನಿಷ್ಕ್ರಿಯ ದಳಕ್ಕೆ ಮಾಹಿತಿ ರವಾನಿಸಿ, ವಾಯುಯಾನ ಭದ್ರತಾ ನಿಯಮದ ಪ್ರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

