ಬದಲಾವಣೆ ವಿಚಾರದ ಬಗ್ಗೆ ಹೈ ಕಮಾಂಡ್ ನಿರ್ಧಾರ..
ಹುಬ್ಬಳ್ಳಿ: ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸವೇ ಇಲ್ಲವಾಗಿದೆ. ಕಾಂಗ್ರೆಸ್ಸಿನವರು ಚನ್ನಾಗಿ ಕೆಲಸ ಮಾಡ್ತಿದ್ದಾರೆ ಎಂದು ಹೇಳಲು ಹೇಗೆ ಸಾಧ್ಯ ಹೀಗಾಗಿ ಕಾಂಗ್ರೆಸ್ ಬಗ್ಗೆ ಬೇಕಾಬಿಟ್ಟಿ ಮಾತನಾಡುವುದನ್ನು ರೂಢಿಸಿಕೊಂಡಿದ್ದಾರೆ ಎಂದು ಬಿಜೆಪಿ ವಿರುದ್ಧ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಆಕ್ರೋಶ ವ್ಯಕ್ತಪಡಿಸಿದರು.ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿಎಂ, ಡಿಸಿಎಂ ಬದಲಾವಣೆ ಬಗ್ಗೆ ಹೈ ಕಮಾಂಡ್ ನಿರ್ಧಾರ ಮಾಡುತ್ತದೆ. ಎಲ್ಲಾ ಸ್ವಾಮಿಗಳು ಹೇಳ್ತಾರೆ ಆದರೇ ಹೈ ಕಮಾಂಡ್ ನಿರ್ಧಾರ ಮಾಡುತ್ತದೆ ಎಂದರು.ಬಿಜೆಪಿಯವರು ಕಾಂಗ್ರೆಸ್ ವಿರುದ್ಧವೇ ಮಾತನಾಡಬೇಕು. ಅದನ್ನು ಬಿಟ್ಟು ಚನ್ನಾಗಿ ಕೆಲಸ ಮಾಡ್ತಿದ್ದಾರೆ ಎಂದು ಹೇಳಲು ಬರುವುದಿಲ್ಲ. ಸಿಎಂ, ಡಿಸಿಎಂ ಬದಲಾವಣೆ ವಿಚಾರ ಯಾವುದು ಇಲ್ಲ. ಈ ಬಗ್ಗೆ ಹೈ ಕಮಾಂಡ್ ಸೂಕ್ತ ನಿರ್ಧಾರ ಹಾಗೂ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

