Breaking News
Featured Video Play Icon

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮೇಯರ್ ಚುನಾವಣೆ ನಿರ್ಧಾರ: ಕೇಂದ್ರ ಸಚಿವ ಜೋಶಿ..!

ಹುಬ್ಬಳ್ಳಿ: ನಾಳೆ ಮೇಯರ್-ಉಪಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಗೆ ಬಂದಿದ್ದೇನೆ.‌ ನನಗೆ ಮೇಯರ್ ಚುನಾವಣೆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಅಭ್ಯರ್ಥಿ ಆಯ್ಕೆಯ ಬಗ್ಗೆ ಎಲ್ಲರೂ ಮನವಿ‌ ಕೊಟ್ಟಿದ್ದಾರೆ. ಈಗ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿದ್ದು, ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ನವರ ಕೃಪೆಯಿಂದ ಅಧಿವೇಶನ ಅರ್ಜನ್ ಆಯ್ತು. ಹೀಗಾಗಿ ನಾಳೆ ಬರಬೇಕಿದ್ದ ನಾನು ಇವತ್ತೇ ಹುಬ್ಬಳ್ಳಿಗೆ ಬರಬೇಕಾಯಿತು ಎಂದರು.ಎಲ್ಲರೂ ಕೂಡ ತಮ್ಮ ತಮ್ಮ ಅಭಿಪ್ರಾಯ ಹೇಳಿಕೊಂಡಿದ್ದಾರೆ. ಅಲ್ಲದೇ ಮನವಿ ಕೂಡ ಸಲ್ಲಿಸಿದ್ದಾರೆ. ಈ ಬಗ್ಗೆ ಎಲ್ಲ ರೀತಿಯಲ್ಲಿ ವಿಚಾರ ಮಾಡಿ, ಸಭೆ ನಡೆಸಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *