Breaking News

ಅಬ್ಬಬ್ಬಾ.. ಒಬ್ಬರಲ್ಲ, ಇಬ್ಬರಲ್ಲ ಬರೋಬ್ಬರಿ 50 ಜನರನ್ನು ಮದುವೆಯಾಗಿ ಸಿಕ್ಕಿಬಿದ್ದ ಕಿಲಾಡಿ ಲೇಡಿ..!

ಅರ್ಧ ಶತಕ ಬಾರಿಸಿದ ಕತರ್ನಾಕ ಕನ್ಯಾಮಣಿ ಶತಕ ಮದುವೆಯ ಆಸೆಗೆ ತಣ್ಣಿರು ಎರಚಿದ ಖಾಕಿಪಡೆ ಈ ಕಥಾ ನಾಯಕಿ ಕಹಾನಿ ಕೇಳಿ ಇಲ್ಲಿದೆ ಅಬ್ಬಬ್ಬಾ.. ಇದು 50 ಮದುವೆಯ ಕಹಾನಿ.. ಕಥಾ ನಾಯಕಿ ಕಥೆ ನೋಡ್ರಿ ಪೋ…..

ತಮಿಳುನಾಡಿನಲ್ಲಿ ಮಹಿಳೆಯೊಬ್ಬಳು ಬರೋಬ್ಬರಿ 50 ಜನರನ್ನು ಮದುವೆಯಾಗಿ ವಂಚಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಸಂಧ್ಯಾ (30) ಎಂಬ ಮಹಿಳೆಯು ಹಣದಾಸೆಗೆ ಬರೋಬ್ಬರಿ 50 ಜನರನ್ನು ವಿವಾಹವಾಗಿ ವಂಚಿಸಿದ್ದಾಳೆ. ಇಲ್ಲಿನ ತಿರುಪುರದಲ್ಲಿನ 35 ವರ್ಷದ ಅವಿವಾಹಿತ ಯುವಕನೊಬ್ಬ ಆನ್‌ಲೈನ್‌ ಪ್ಲಾಟ್‌ಫಾರ್ಮ್‌ ʼ‌ದಿ ತಮಿಳು ವೇʼ ನಲ್ಲಿ ಪರಿಚಯವಾದ ಸಂಧ್ಯಾ ಎಂಬ ಮಹಿಳೆಯನ್ನು ಕೆಲ ಸಮಯದ ಹಿಂದೆ ಮದುವೆಯಾಗಿದ್ದನು… ಮದುವೆಯಾದ ಕೆಲ ದಿನಗಳ ಬಳಿಕ ಆಕೆಯ ವರ್ತನೆಯಲ್ಲಿ ತೀರಾ ಬದಲಾವಣೆ ಕಂಡು ಬಂದಿದ್ದು, ನಂತರ ಆತ ಸಂಧ್ಯಾಳ

ಆಧಾರ್‌ ಕಾರ್ಡ್‌ ಪರಿಶೀಲಿಸಿದ್ದಾರೆ. ಆಧಾರ್‌ ಕಾರ್ಡ್‌ ದಾಖಲೆಯಲ್ಲಿ ಸಂಧ್ಯಾಳ ಪತಿಯ ಹೆಸರು ಬೇರೆಯೇ ಇದೆ. ತನಗೆ ವಂಚನೆ ಮಾಡಿದ್ದಾಳೆ ಎಂದು ತಿಳಿದ ಈ ಯುವಕ ಸೀದಾ ಹೋಗಿ ತಾರಾಪುರಂ ಪೊಲೀಸ್‌ ಠಾಣೆಗೆ ದೂರನ್ನು ನೀಡಿದ್ದಾನೆ. ಪೊಲೀಸರು ಸಂಧ್ಯಾಳನ್ನು ವಿಚಾರಣೆ ಒಳಪಡಿಸಿದಾಗ ಆಕೆಯ ವಂಚನೆಗಳು ಬಯಲಾಗಿವೆ. 10 ವರ್ಷಗಳ ಹಿಂದೆಯೇ ಮದುವೆಯಾಗಿದ್ದ ಈಕೆಗೆ ಒಂದು ಮಗು ಕೂಡಾ ಇದೆ. ನಂತರ ತನ್ನ ಮೊದಲ ಪತಿಯಿಂದ ಬೇರ್ಟಟ್ಟು ಹಣದಾಸೆಗೆ ಅವಿವಾಹಿತ ಪುರುಷೆನ್ನೇ ಟಾರ್ಗೆಟ್‌ ಮಾಡಿ ಮಾದುವೆಯಾಗಿ ಸ್ವಲ್ಪ ದಿನಕ್ಕೆಯೇ ದುಡ್ಡು ಬಂಗಾರವನ್ನು ಎತ್ತಿಕೊಂಡ ಎಸ್ಕೇಪ್‌ ಆಗುತ್ತಿದ್ದಳು. ಹೀಗೆ ಡಿವೈಎಸ್ಪಿ, ಎಸ್ಪಿ, ಉದ್ಯಮಿಗಳು ಸೇರಿದಂತೆ 50 ಜನರಿಗೆ ವಂಚಿಸಿದ್ದಾಳೆ. ಇದೀಗ ಆಕೆಯ ಮೋಸದಾಟ ಬಯಲಾಗಿದ್ದು, ಪೊಲೀಸರ ಅತಿಥಿಯಾಗಿದ್ದಾಳೆ.

Share News

About Shaikh BigTv

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *