ಹುಬ್ಬಳ್ಳಿ: ನಿವೇಶನ ಹಂಚಿಕೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ನೇತೃತ್ವದಲ್ಲಿಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಕಚೇರಿ ಎದರು ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಆಳುವ ಸರ್ಕಾರಗಳಿಂದ ಕೈಮಗ್ಗ ನೇಕಾರರಿಗೆ ಅನ್ಯಾಯವಾಗುತ್ತಿದೆ. ಇದರಿಂದಾಗಿ ನೇಕಾರರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನೇಕಾರರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು. ಕೆ.ಎಚ್.ಡಿ.ಸಿ ನಿಗಮದ ಮೂಲಕ ನೇಕಾರರಿಗೆ ನಿವೇಶನ ಹಂಚಿಕೆ ಮಾಡಬೇಕು. ಕೆ.ಎಚ್.ಡಿ.ಸಿ ನಿಗಮದಲ್ಲಿ ನೂರಾರು ಕೋಟಿ ಅವ್ಯವಹಾರ ನಡೆದಿದೆ. ಇದರ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕೆಂದು ಆಗ್ರಹ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ಇನ್ನೂ ಬೇಡಿಕೆ ಈಡೇರದೆ ಇದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದು, ಕೈಮಗ್ಗ ಅಭಿವೃದ್ಧಿ ನಿಗಮದ ಅಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

