ಹುಬ್ಬಳ್ಳಿ: ಗ್ಯಾಸ್ ಕಟರ್ ಬಳಸಿ ಬಂಗಾರದ ಅಂಗಡಿ ಕೀ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಿದ ಘಟನೆ ಕೇಶ್ವಾಪುರದ ರಮೇಶ ಭವನದ ಬಳಿ ನಡೆದಿದೆ.ಹುಬ್ಬಳ್ಳಿಯ ಕೇಶ್ವಾಪುರದ ರಮೇಶ್ ಭವನದ ಬಳಿಯ ಭುವನೇಶ್ವರಿ ಜ್ಯುವೆಲರಿ ಶಾಪ್ ನ ಕೀಲಿಯನ್ನು ಗ್ಯಾಸ್ ಕಟ್ಟರ್ ನಿಂದ ತುಂಡು ಮಾಡಿದ ಖದೀಮರು, ನಂತರ ಗ್ಲಾಸ್ ಒಡೆದು ಒಳನುಗ್ಗಿ 800 ಗ್ರಾಮ್ ಚಿನ್ನ ಮತ್ತು 50 ಕೆ.ಜಿ ಬೆಳ್ಳಿ ಕಳ್ಳತನ ಮಾಡಿದ್ದಾರೆ. ಈ ಆಭರಣ ಅಂಗಡಿ ಜಗದೀಶ್ ದೈವಜ್ಞ ಎಂಬುವರಿಗೆ ಸೇರಿದ್ದಾಗಿದೆ. ಬೆಳಗಿನ ಜಾವ 2 ಗಂಟೆ ವೇಳೆಗೆ ನಡೆದಿರುವ ಸಾಧ್ಯತೆ ಇದೆ. ಮೊದಲು ಸಿಸಿ ಕ್ಯಾಮೆರಾಕ್ಕೆ ಸ್ಪ್ರೇ ಮಾಡಿ ನಂತರ ಕಳ್ಳತನ ಮಾಡಲಾಗಿದೆ.ಇನ್ನೂ ಘಟನಾ ಸ್ಥಳಕ್ಕೆ ಹು-ಧಾ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
Check Also
ಪೌರಕಾರ್ಮಿಕಗೆ ಕೇರಳ ಯುವತಿಯಿಂದ ಕಲ್ಲೇಟು
ಬೆಂಗಳೂರು: ರಸ್ತೆಬದಿ ಚಹಾ ಕಪ್ ಎಸೆಯದಂತೆ ಸಲಹೆ ನೀಡಿದ ಪೌರಕಾರ್ಮಿಕನ ಮೇಲೆ ಕೇರಳ ಮೂಲದ ಮಹಿಳೆ ಕಲ್ಲಿನಿಂದ ಹಲ್ಲೆ ನಡೆಸಿದ …
bigtvnews | Hubli Dharwad News | Kannada News | Karnataka News Hubli News | News In Hubli | Local news

