Breaking News
Featured Video Play Icon

ಪೊಲೀಸ್ ಠಾಣೆಯಲ್ಲೇ ಎಣ್ಣೆ ಪಾರ್ಟಿ ಮಾಡಿದ ಅಧಿಕಾರಿಗಳು; ಕಂಠಪೂರ್ತಿ ಕುಡಿದು ತೂರಾಡಿದ…? video viral…

ಲಖನೌ ಆಘಾತಕಾರಿ ಘಟನೆಯೊಂದರಲ್ಲಿ ಕರ್ತವ್ಯನಿರತ ಪೊಲೀಸ್​ ಅಧಿಕಾರಿಗಳು ಠಾಣೆಯೊಳಗೇ ಎಣ್ಣೆ ಪಾರ್ಟಿ ಮಾಡುತ್ತ ಸಂಭ್ರಮಿಸುತ್ತಿರುವ ಘಟನೆ ಉತ್ತರಪ್ರದೇಶದ ಶಾಮ್ಲಿ ಜಿಲ್ಲೆಯ ಮೊಹ್ಲಾ ರೈಲ್​ಪಾರ್​ ಕಂಟ್ರೋಲ್​ ರೂಮ್​ನಲ್ಲಿ ನಡೆದಿದೆ. ಘಟನೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ. ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ ಮೂವರು ಅಧಿಕಾರಿಗಳು ಠಾಣೆಯೊಳಗೆ ಮದ್ಯ ಸೇವಿಸುತ್ತಾ ಆರಾಮಾಗಿ ಕುಳಿತುಕೊಂಡು ಮಾತನಾಡುತ್ತಿರುವುದನ್ನು ನೋಡಬಹುದಾಗಿದೆ. ಈ ವೇಳೆ ಅಧಿಕಾರಿಯೋರ್ವ ತನ್ನ ಸಹೋದ್ಯೋಗಿಗಳನ್ನು ಕಿಚ್ಚಾಯಿಸುತ್ತಿರುವುದನ್ನು ವೈರಲ್​ ಆಗಿರುವ ವಿಡಿಯೋದಲ್ಲಿ ನೋಡಬಹುದಾಗಿದೆ.ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮೂವರನ್ನು ಕರ್ತವ್ಯಲೋಪ ಆರೋಪದಡಿ ಅಮಾನತು ಮಾಡಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Share News

About Shaikh BigTv

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *