Breaking News

14 ವರ್ಷದಿಂದ ತಲೆಮರೆಸಿಕೊಂಡಿದ್ದ ರೌಡಿ ಬಂಧನ…

ಬೆಂಗಳೂರು: ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿ ಯೋಹಾನ್ ಅಲಿಯಾಸ್‌ ಪಾಲು (36) ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.. ಈತನ ವಿರುದ್ಧ ಚಂದ್ರಾಲೇಔಟ್, ಅನ್ನಪೂರ್ಣೇಶ್ವರಿನಗರ, ಬಾಗಲಗುಂಟೆ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.. ವೈಯಾಲಿಕಾವಲ್‌ ಪೊಲೀಸ್ ಠಾಣೆಯಲ್ಲಿ ಆರೋಪಿ ಯೋಹಾನ್ ವಿರುದ್ಧ 2010ರಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. 2012ರಿಂದ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆರೋಪಿ ಪತ್ತೆಗಾಗಿ ತಂಡ ರಚಿಸಲಾಗಿತ್ತು. ಈತನ ಬಗ್ಗೆ ಮಾಹಿತಿಗಳನ್ನು ಕಲೆ ಹಾಕಿ, ಬಂಧಿಸಿ ವೈಯಾಲಿ ಕಾವಲ್ ಠಾಣೆ ಒಪ್ಪಿಸಲಾಗಿದೆ…

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *