ಧಾರವಾಡ ವಿದ್ಯಾಗಿರಿ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡಿ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದ ಆರೋಪದ ಮೇರೆಗೆ 11 ಮಂದಿಯನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.ಧಾರವಾಡದ ಇರಾನಿ ಕಾಲೋನಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯನ್ನು ಆಧರಿಸಿ ಕಮಿಷನರ್ ಎನ್. ಶಶಿಕುಮಾರ್ ಹಾಗೂ ಡಿಸಿಪಿ ಗಳಾದ ನಂದಗಾವಿ ಹಾಗೂ ರವೀಶ್ ಮಾರ್ಗದರ್ಶನದಲ್ಲಿ ವಿದ್ಯಾಗಿರಿ ಠಾಣೆಯ ಇನ್ಸೆಕ್ಟರ್ ನೇತೃತ್ವದಲ್ಲಿ ದಾಳಿ ನಡೆಸಿ, ಗಾಂಜಾ ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ 11

ಆರೋಪಿಗಳನ್ನು ಬಂಧಿಸಲಾಗಿದೆ.ಬಂಧಿತರನ್ನು ಮುಹಮ್ಮದ್, ದಾದಾಪೀರ್, ಪರಮೇಶ್ವರ, ಬಾಬಾಜಾನ್, ಅಬುಜಕರ್, ಜಾಫರ್, ಸಾಧಿಕ್, ಸಲ್ಮಾನ್, ಮುಹಮ್ಮದ್ ಹಾಗೂ ಸಜ್ಜಾದ್ ಅಂತಾ ಗುರುತಿಸಲಾಗಿದ್ದು ಈ ಆರೋಪಿಗಳ ಮೇಲೆ ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

