ಹುಬ್ಬಳ್ಳಿ: ಪ್ರಸ್ತುತ ದಿನಗಳಲ್ಲಿ ವಿಜ್ಞಾನ ಅದೆಷ್ಟೋ ಮುಂದುವರಿದಿದ್ದರೂ ಕೂಡ ಇಂದಿಗೂ ಬಹುತೇಕರು ವಾಮಾಚಾರದಂತಹ ಅಡ್ಡದಾರಿಗಳನ್ನು ಹಿಡಿದು ಸಾರ್ವಜನಿಕರಲ್ಲಿ ಆತಂಕವನ್ನುಂಟು ಮಾಡುವ ಹೀನ ಕೃತ್ಯಕ್ಕೆ ಕೈ ಹಾಕುತ್ತಿದ್ದಾರೆ. ಸಾವಿರಾರು ಮಕ್ಕಳು ಶಾಲೆಗೆ ಹೋಗುವ ಮಾರ್ಗ ಮಧ್ಯದಲ್ಲಿಯೇ ವಾಮಾಚಾರ ಮಾಡಿಸಿ ಇಟ್ಟಿರುವುದು ಪಾಲಕರಲ್ಲಿ ಆತಂಕ ಮನೆ ಮಾಡಿದೆ.

ನಮ್ಮ ಮಕ್ಕಳು ಎಲ್ಲಿ ಇದ್ದರೇ ಸೂಕ್ತ ಎಂಬುವುದೇ ಈಗ ಯಕ್ಷ ಪ್ರಶ್ನೆಯಾಗಿದೆ… ಇಲ್ಲಿನ ರಾಜನಗರದಲ್ಲಿರುವ ಕೇಂದ್ರೀಯ ವಿದ್ಯಾಲಯ ನಂ.01 ರ ಬಳಿ ಪ್ರತಿ ಅಮವಾಸ್ಯೆ ಹಾಗೂ ಹುಣ್ಣುಮೆ ಸಂಧರ್ಭದಲ್ಲಿ ವಾಮಾಚಾರ ನಡೆಯುತ್ತಿದೆ. ನೂರಾರು ಸಂಖ್ಯೆಯಲ್ಲಿ ವಿಧ್ಯಾರ್ಥಿಗಳು ಈ ಶಾಲೆಗೆ ಹೋಗುತ್ತಾರೆ. ಅಲ್ಲದೆ ಶಾಲೆಗೆ ಹೋಗುವ ಸಂದರ್ಭದಲ್ಲಿ ಎದುರಾಗುವ ವಾಮಾಚಾರದ ವಸ್ತುಗಳನ್ನು ನೋಡಿ ಪಾಲಕರು ಆತಂಕದಲ್ಲಿದ್ದಾರೆ. ಇನ್ನೂ ಓದುವ ಮಕ್ಕಳಲ್ಲಿ ಇಂತಹ ವಿಷಯಗಳು ಸಾಕಷ್ಟು ವ್ಯತಿರಿಕ್ತ ಪರಿಣಾಮ ಬೀರುತ್ತವೆ.ಈಗಾಗಲೇ ಸಾಕಷ್ಟು ಬಾರಿ ಇಂತಹ ಪ್ರಕರಣ ಬೆಳಕಿಗೆ ಬಂದಿದ್ದರೂ ಪ್ರಯೋಜನವಾಗಿಲ್ಲ. ಈ ಬಗ್ಗೆ ಪೊಲೀಸ್ ಇಲಾಖೆ ಹಾಗೂ ಶಾಲಾ ಆಡಳಿತ ಮಂಡಳಿ ಸೂಕ್ತ ಕ್ರಮಗಳನ್ನು ಜರುಗಿಸಬೇಕಿದೆ. ಅಲ್ಲದೇ ಸಿಸಿ ಟಿವಿ ಕ್ಯಾಮೆರಾ ಅಳವಡಿಸುವ ಕಾರ್ಯಕ್ಕೆ ಮುಂದಾಗಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

