Breaking News
Featured Video Play Icon

ಹೊಸೂರಿನ ಗಾಳಿದುರ್ಗಮ್ಮ ದೇವಿ ಜಾತ್ರೆ: ವಿಶೇಷ ಪೂಜೆ ಸಲ್ಲಿಕ್ಕೆ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಹೊಸೂರಿನ ಗಾಳಿದುರ್ಗಮ್ಮ ದೇವಿಯ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು. ಗಾಳಿ ದುರ್ಗಮ್ಮ ದೇವಿಯ ದರ್ಶನಕ್ಕೆ ಜನಸಾಗರವೇ ಹರಿದು ಬಂದಿದೆ..ಹೌದು.. ಪ್ರತಿವರ್ಷದಂತೆ ಈ ವರ್ಷವೂ ಕೂಡ ಹೊಸೂರಿನ ಆರಾಧ್ಯ ದೈವ ಗಾಳಿ ದುರ್ಗಮ್ಮ ದೇವಿಯ ಜಾತ್ರಾ ಮಹೋತ್ಸವ ನಡೆದಿದ್ದು, ವಿಶೇಷ ಪೂಜೆ ಪುನಸ್ಕಾರದ ಮೂಲಕ ಗೌರವ ಸಮರ್ಪಣೆ ಮಾಡಲಾಯಿತು. ಅಲ್ಲದೆ ಗಾಳಿ ದುರ್ಗಮ್ಮ ದೇವಿಯ ದರ್ಶನಕ್ಕೆ ಹುಬ್ಬಳ್ಳಿ ಮಾತ್ರವಲ್ಲದೆ ಸುತ್ತಮುತ್ತಲಿನ ಜಿಲ್ಲೆಗಳ ಜನರು ಆಗಮಿಸಿ ದರ್ಶನ ಪಡೆದು ಪುನೀತರಾದರು.ಇನ್ನೂ ಗಾಳಿ ದುರ್ಗಮ್ಮದೇವಿಗೆ ವಿಶೇಷ ಹೂವಿನ ಅಲಂಕಾರ ಮಾಡಿದ್ದು, ಬೆಳ್ಳಂಬೆಳಿಗ್ಗೆಯಿಂದ ಹೋಮ್ ಹವನ, ವಿಶೇಷ ಪೂಜೆ ಸಲ್ಲಿಸುವ ಮೂಲಕ ಅದ್ದೂರಿಯಾಗಿ ಆಚರಿಸಲಾಯಿತು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *