ಕುಚ್ ಕುಚ್ ಕರೇತೋ ಚಲ್ತಾ ಅಂದ್ರೆ ಕಂಬಿ ಹಿಂದೆ ಮುದ್ದೆ ಮುರಿಯೋದ ಗ್ಯಾರಂಟಿ…
ಮನೆಗೆ ಒಳ್ಳೆ ಮಕ್ಕಳಾಗಿ ಸಮಾಜಕ್ಕೆ ಮಾದರಿಯಾಗಿ ಅಂತ ಮೊದಲೇ ಹೇಳಿದ್ದ ಕಮಿಷನರ್..!!!
ಗಾಂಜಾ ಮಾರುತ್ತಿದ ಡಜನ್ ಆರೋಪಿಗಳು ಅಂದರ್…
ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರು 12 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಂಜಾ ಮಾರಾಟವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಕಾರ್ಯಾಚರಣೆ ನಡೆಸಿ ಸೂಕ್ತ ಕ್ರಮಗಳನ್ನು ಜರುಗಿಸುತ್ತಿದ್ದಾರೆ.ಇಲ್ಲಿನ ಅರವಿಂದನಗರ ಬಿದ್ದ ಕಟ್ಟಡದಲ್ಲಿ ಗಾಂಜಾ ಮಾದಕ ಪದಾರ್ಥವನ್ನು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಸಿಗುತ್ತಿದ್ದಂತೆಯೇ ಹಳೇಹುಬ್ಬಳ್ಳಿಯ ಪೊಲೀಸ್ ಠಾಣೆಯ ಪೋಲಿಸರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಜು.24 ರಂದು ರಾತ್ರಿ 10.30 ಕ್ಕೆ ದಾಳಿ ಮಾಡಿದ್ದಾರೆ. ಒಟ್ಟು 1ಲಕ್ಷ ಮೌಲ್ಯದ 1 ಕೆಜಿ 365 ಗ್ರಾಂ ಗಾಂಜಾ, 2 ಸಾವಿರ ನಗದು, 3 ದ್ವಿ ಚಕ್ರ ವಾಹನ ಹಾಗೂ 9 ಮೊಬೈಲ್ ವಶಪಡಿಸಿಕೊಂಡು, ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.ಒಟ್ನಲ್ಲಿ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಎಗ್ಗಿಲ್ಲದೇ ನಡೆಯುತ್ತಿದ್ದ ಗಾಂಜಾ ಪ್ರಕರಣ ಮಟ್ಟ ಹಾಕಲು ಪೊಲೀಸ್ ಕಮೀಷನರೇಟ್ ದಿಟ್ಟ ನಿರ್ಧಾರ ಮಾಡಿದ್ದು, ಗಾಂಜಾ ಮಾರಾಟ ಮಾಡುತ್ತಿದ್ದ 12 ಜನ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹಳೇ ಹುಬ್ಬಳ್ಳಿ ಪೋಲಿಸರ ಈ ಕಾರ್ಯಕ್ಕೆ ಅವಳಿನಗರದ ಜನತೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ..ಸದಾ ಒಂದಿಲ್ಲೊಂದು ವಿಚಾರದಲ್ಲಿ ಅವಳಿನಗರ ಸದ್ದು ಮಾಡುತ್ತಿದ್ದು, ಹು-ಧಾರವಾಡ ಕಮೀಷನರೇಟ್ ದಿಟ್ಟ ನಿರ್ಧಾರದಿಂದ ಗಾಂಜಾ ಆಸಾಮಿಗಳನ್ನು ಹಳ್ಳಕ್ಕೆ ಕೆಡವಿದ್ದಾರೆ. ಇನ್ನಾದ್ರೂ ಅವಳಿನಗರದಲ್ಲಿ ಗಾಂಜಾ ಗಾಟು ಕಡಿಮೆಯಾಗುತ್ತಾ ಅನ್ನೋದನ್ನು ಕಾದು ನೋಡಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

