Breaking News
Featured Video Play Icon

ಹುಬ್ಬಳ್ಳಿಯಲ್ಲಿ ವರುಣಾರ್ಭಟ: ಜನಜೀವನ ಅಸ್ತವ್ಯಸ್ತ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಗಾಳಿ ಸಮೇತ ಮಳೆ ಸುರಿಯುತ್ತಿರುವುದರಿಂದ ನಿಜಕ್ಕೂ ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಳ್ಳಂಬೆಳಿಗ್ಗೆ ಸುರಿಯುವ ಮಳೆಗೆ ಅಕ್ಷರಶಃ ಜನರು ಹೈರಾಣಾಗಿದ್ದಾರೆ.

ಕೆಲವು ಕಡೆ ಮರಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದಿದ್ದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು. ರಸ್ತೆಗಳು ಸ್ಥಗಿತವಾಗಿದ್ದವು. ಬಿದ್ದಿರುವ ಮರಗಳ ತೆರವು ಕಾರ್ಯಾಚರಣೆಯನ್ನು ಪಾಲಿಕೆಯ ಸಿಬ್ಬಂದಿ ಹಾಗೂ ಹೆಸ್ಕಾಂ ಸಿಬ್ಬಂದಿ ತಕ್ಷಣವೇ ಆರಂಭಿಸಿದರು.

ಇನ್ನೂ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನಗರದ ಪ್ರಮುಖ ರಸ್ತೆಗಳು ತೆಗ್ಗು ಗುಂಡಿಗಳು ಬಿದ್ದು, ಹೊಂಡದಂತಾಗಿವೆ. ರಸ್ತೆಗಳು ಜಲಾವೃತವಾಗಿ ಗಟಾರ ಹಾಗೂ ಒಳಚರಂಡಿಗಳು ತುಂಬಿ ಹರಿಯುತ್ತಿವೆ. ಮಳೆ ಬಿಡದೆ ಆಗುತ್ತಿರುವುದರಿಂದ ನಗರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿ ಸ್ಥಗಿತವಾಗಿವೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *