ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಬಿಡಿದಿ ಬಳಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಿಮ್ಮೇಗೌಡರು ಬೆಂಗಳುರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ಆತ್ಮಹತ್ಯೆಗೆ ಶರಣಾಗಿದ್ದು, ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಕಳೆದ ತಿಂಗಳ 27ರಂದು ಮನೆ ಓನರ್‌ಗೆ ಕರೆ ಮಾಡಿದ್ದ ಜೇಮ್ಸ್, ಆಗಸ್ಟ್ 1ರವರೆಗೂ ನನ್ನನ್ನು ಡಿಸ್ಟರ್ಬ್ ಮಾಡಬೇಡಿ ಎಂದು ಹೇಳಿದ್ದ. ಶನಿವಾರ ಮನೆ ಮಾಲೀಕ ಎಷ್ಟೇ ಕರೆ ಮಾಡಿದರೂ ಜೇಮ್ಸ್ ಸ್ವೀಕರಿಸಿರಲಿಲ್ಲ. ಹೀಗಾಗಿ ಅನುಮಾನಗೊಂಡು ಮನೆ ಬಳಿ ಹೋಗಿ ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.ಕೂಡಲೇ ಕೋರಮಂಗಲ ಪೊಲೀಸರಿಗೆ ಮನೆ ಮಾಲೀಕ ಜನಾರ್ದನ್ ಮಾಹಿತಿ ನೀಡಿದ್ದಾರೆ. ಕೋರಮಂಗಲ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಾವಿನ ಬಗ್ಗೆ ತನಿಖೆ ಕೈಗೊಂಡಿರುವ ಪೊಲೀಸರು, ಈ ಬಗ್ಗೆ ಎಫ್‌ಆರ್‌ಆರ್‌ಓಗೆ ಮಾಹಿತಿ ನೀಡಿದ್ದಾರೆ. ಕೋರಮಂಗಲ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

