Breaking News

ಸಬ್ ಅರ್ಬನ್ ಪೊಲೀಸ್ ಕಾರ್ಯಾಚರಣೆ: ಇಬ್ಬರೂ ಬೈಕ್ ಕಳ್ಳರು ಅರೆಸ್ಟ್..

ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕ್ರೈಮ್ ಪ್ರಕರಣ ಕಟ್ಟಿ ಹಾಕಲು ಕಮೀಷನರೇಟ್ ದಿಟ್ಟ ಹೆಜ್ಜೆಯಿಟ್ಟಿದ್ದು, ಈಗ ಇಬ್ಬರು ಕಳ್ಳರನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.ಇತ್ತೀಚೆಗೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನವಾದ ಬಗ್ಗೆ ಪ್ರಕರಣವೊಂದು ದಾಖಲಾಗಿದ್ದು, ಪ್ರಕರಣವನ್ನು ಭೇದಿಸಲು ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹುಬ್ಬಳ್ಳಿ ಉತ್ತರ ಉಪವಿಭಾಗದ ಎಸಿಪಿ ಶಿವಪ್ರಕಾಶ್ ನಾಯಕ್ ನೇತೃತ್ವದಲ್ಲಿ ಹುಬ್ಬಳ್ಳಿ

ಉಪನಗರ ಪೊಲೀಸ್ ಠಾಣೆಯ ಪೊಲೀಸ ಇನ್ಸಪೆಕ್ಟರಾದ ಎಂ.ಎಸ್ ಹೂಗಾರ್ ಆ್ಯಂಡ್ ಟೀಮ್ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು. ತಂಡವು ಆರೋಪಿತರ ಬಗ್ಗೆ ಮಾಹಿತಿ ಕಲೆಹಾಕಿ ರಮೇಶ ಗಂಗಪ್ಪ ಮುಗಳಿಕಟ್ಟಿ ಹಾಗೂ ಶರೀಪ ನಾಗಪ್ಪ ಬೆಂಡಲಗಟ್ಟಿ ಎಂಬ ಆರೋಪಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು,

ಆರೋಪಿಗಳು ಕಳ್ಳತನ ಮಾಡಿದ್ದ 2.00,000 ಮೌಲ್ಯದ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ಬೈಕ್ ಕಳ್ಳತನ ಮಾಡಿದ್ದ ಆರೋಪಿತರನ್ನು ಬಂಧಿಸುವಲ್ಲಿ ಯಶಸ್ವಿಯಾದ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆ ಪಿಐ ನೇತೃತ್ವ ತಂಡದ ಕಾರ್ಯ ವೈಖರಿಯನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿರುತ್ತಾರೆ.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *