ಗನ್ ಪಾಯಿಂಟ್ ನಲ್ಲಿ ಡಿವೈಎಸ್ಪಿ ಗೋಪಾಲಕೃಷ್ಣ ನಾಯ್ಕ್ ಬೆದರಿಕೆ, ಸುಳ್ಳು ಕೇಸ್ ಬಗ್ಗೆ DYSP ಹೇಳಿದ್ದೇನು..?
ಶಿವಮೊಗ್ಗ ಸಾಗರದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸರು ಸೇರಿ ಕಿರುಕುಳ ನೀಡುತ್ತಿದ್ದಾರೆ. ನನಗೆ ನ್ಯಾಯ ಸಿಗೋವರೆಗೂ ನಾನು ಕೋರ್ಟ್ ಬಿಟ್ಟು ಹೋಗುವುದಿಲ್ಲ. ನನ್ನನ್ನು ಕಾಪಾಡಿ” ಎಂದು ಸಾಗರದ ಕೆಪಿಟಿಸಿಎಲ್ ಸಹಾಯಕ ಎಂಜಿನಿಯರ್ ಒಬ್ಬರು ಮಂಗಳವಾರ ಕರ್ನಾಟಕ ಹೈಕೋರ್ಟ್ ಮುಂದೆ ಕೈಮುಗಿದು ಅಂಗಲಾಚಿದ ಪ್ರಸಂಗ ನಡೆದಿದೆ.. ಬೆಳಗಿನ ಕಲಾಪ ಮುಗಿಯುತ್ತಿದ್ದಂತೆ ಊಟಕ್ಕೆ ತೆರಳಲು ಸಿದ್ಧರಾದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಮುಂದೆ ಕೈಮುಗಿದು ನಿಂತ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ಸಹಾಯಕ ಎಂಜಿನಿಯರ್ ಆಗಿರುವ ಶಾಂತಕುಮಾರ ಸ್ವಾಮಿ ಮಾತಿಗೆ ಚಕಿತಗೊಂಡ ನ್ಯಾಯಮೂರ್ತಿ ಇಡೀ ಘಟನೆಯನ್ನು ಸಾವಧಾನದಿಂದ ಆಲಿಸಿ “ಇಂಥ ಕೃತ್ಯದಿಂದ ಹಿಂದೆ ಸರಿಯುವಂತೆ ಡಿವೈಎಸ್‌ಪಿಗೆ ತಿಳಿಸಿ, ಇಲ್ಲವಾದರೆ ಅವರನ್ನು ನ್ಯಾಯಾಲಯಕ್ಕೆ ಕರೆಯಿಸಬೇಕಾಗುತ್ತದೆ. ಆರೋಪ ನಿಜವಾಗಿದ್ದರೆ ಅವರು ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಖಡಕ್ ಮೌಖಿಕ ಎಚ್ಚರಿಕೆ ನೀಡಿದ್ದು, ವಿಚಾರವನ್ನು ಅಧಿಕಾರಿಗೆ ತಿಳಿಸುವಂತೆ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್ ಜಗದೀಶ್ ಅವರಿಗೆ ತಿಳಿಸಿದರು.”ಸ್ಥಳೀಯ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಮತ್ತು ಪೊಲೀಸರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದನ್ನು ರೆಕಾರ್ಡ್ ಮಾಡಿ, ನಾನು ಲೋಕಾಯುಕ್ತಕ್ಕೆ ದೂರು ನೀಡಿದ್ದೆ. ಲೋಕಾಯುಕ್ತಕ್ಕೆ ದೂರು ನೀಡಿದ್ದೀಯಾ ಎಂದು ಸಾಗರದಲ್ಲಿ ಇರಲು ನನ್ನನ್ನು ಬಿಡುತ್ತಿಲ್ಲ” ಎಂದು ಅವಲತ್ತುಕೊಂಡರು. ಸುಳ್ಳು ಗಾಂಜಾ ಪ್ರಕರಣದಲ್ಲಿ ನನ್ನನ್ನು ಬಂಧಿಸಿ ಶಿವಮೊಗ್ಗ ಜೈಲಿಗೆ ಅಟ್ಟಿದ್ದರು. ಹೈಕೋರ್ಟ್‌ನಲ್ಲಿ ಪೊಲೀಸರ ಬಗ್ಗೆ ದೂರುತ್ತೀಯಾ..? ರಿವಾಲ್ವಾರ್ ಇಟ್ಟು ಎನ್‌ಕೌಂಟರ್ ಮಾಡಲಾಗುವುದು ಎಂದು ಡಿವೈಎಸ್‌ಪಿ ಹೆದರಿಸಿದ್ದಾರೆ ರೌಡಿ ಶೀಟ್ ತೆರೆಯಲಾಗುವುದು ಎಂದು ಬೆದರಿಕೆ ಹಾಕಿ ಮೊಬೈಲ್ ಮತ್ತು ಪರ್ಸ್ ಕಸಿದುಕೊಂಡಿದ್ದಾರೆ” ಎಂದು ಜಡ್ಜ್ ಮುಂದೆ ಕಣ್ಣೀರು ಸುರಿಸಿದರು.ಇದೆಲ್ಲವನ್ನೂ ರೆಕಾರ್ಡ್ ಮಾಡಲಾಗುತ್ತದೆ. ಡಿವೈಎಸ್‌ಪಿ ಈ ರೀತಿ ನಡೆದುಕೊಂಡಿದ್ದರೆ ಖಂಡಿತಾಗಿಯೂ ಅವರ ಮೇಲೆ ಕ್ರಮಕ್ಕೆ ನಿರ್ದೇಶಿಸಲಾಗುವುದು. ನೀವು ಹೇಳಿರುವುದು ಸುಳ್ಳಾಗಿದ್ದರೆ ನಿಮ್ಮ ವಿರುದ್ಧ ಕ್ರಮಕ್ಕೆ ಆದೇಶಿಸಲಾಗುವುದು. ಸಿದ್ಧರಾಗಿರಿ, ಹಾಗೆ ನಾಳೆ ನ್ಯಾಯಾಲಯದ ಮುಂದೆ ಹಾಜರಾಗಬೇಕು” ಎಂದು ಹೇಳಿ, ವಿಚಾರಣೆ ನಾಳೆಗೆ ಮುಂದೂಡಿದರು ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

