Breaking News

ಗಾಂಜಾ ಅಮಲಿನಲ್ಲಿ ವೀಲಿಂಗ್‌, ಬೆರಳು ತೋರಿಸಿ ಅಸಭ್ಯ ವರ್ತನೆ- ತಕ್ಕ ಪಾಠ ಕಲಿಸಿದ ಪೊಲೀಸರು..

ಬೆಂಗಳೂರು ಗಾಂಜಾ ಸೇವಿಸಿ ನಶೆಯಲ್ಲಿ ವೀಲಿಂಗ್‌ ಮಾಡಿದ್ದಲ್ಲದೇ ಜನರಿಗೆ ಮಧ್ಯದ ಬೆರಳು ತೋರಿಸಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಪೊಲೀಸರು ಸರಿಯಾದ ಪಾಠ ಕಲಿಸಿರುವ ಘಟನೆ ನಗರದಲ್ಲಿ ನಡೆದಿದೆ… ಯುವಕ ಮಾಗಡಿ ಮುಖ್ಯರಸ್ತೆಯಲ್ಲಿ ಹೋಡಾ ಡಿಯೋ ಸ್ಕೂಟರ್‌ನಲ್ಲಿ ವೀಲಿಂಗ್‌ ಮಾಡುತ್ತಾ ತನ್ನ ಮಧ್ಯದ ಬೆರಳನ್ನು ಮೇಲಕ್ಕೆ ಎತ್ತಿ ಅಸಭ್ಯ ವರ್ತನೆ ತೋರುತ್ತಿದ್ದ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.. ಕಾರ್ಯ ಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಆಗಮಿಸಿ ವ್ಯಕ್ತಿಯನ್ನು ಸ್ಕೂಟರ್‌ ಸಮೇತ ವಶಪಡಿಸಿಕೊಂಡಿದ್ದಾರೆ.ವಿಚಾರಣೆ ವೇಳೆ ಪೊಲೀಸರು ವ್ಯಕ್ತಿಯ ಮೊಬೈಲ್‌ ಅನ್ನು ಪರಿಶೀಲಿಸಿದ್ದು, ಈ ವೇಳೆ ಆತ ಮಾದಕ ವಸ್ತುಗಳ ಬಗ್ಗೆ ಚಾಟ್‌ ಮಾಡಿರುವುದು ಪತ್ತೆಯಾಗಿದೆ. ಹೆಚ್ಚಿನ ವಿಚಾರಣೆ ನಡೆಸಿದಾಗ ಆತ ಗಾಂಜಾ ಸೇವನೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ಕಳುಹಿಸಿ ಪರೀಕ್ಷೆ ಮಾಡಿಸಿದಾಗಲೂ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ.ಆರೋಪಿ ನಿಷೇಧಿತ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟ ಹಿನ್ನೆಲೆ ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಕಾಮಾಕ್ಷಿಪಾಳ್ಯ ಕಾನೂನು ಸುವ್ಯವಸ್ಥೆ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *