Breaking News
Featured Video Play Icon

ಮಾತು ತಪ್ಪದ ಪೊಲೀಸ್ ಕಮೀಷನರ್ ಗಾಂಜಾ ಮುಕ್ತ ಅವಳಿನಗರಕ್ಕೆ ಇದು ಸಾಕ್ಷಿ..

ದೊಡ್ಡ ತಿಮಿಂಗಿಲಗಳು ಬಲೆಗೆ

ಗಾಂಜಾ ಪೆಡ್ಲರ್ ಗ್ಯಾಂಗ್ ಬೆನ್ನಟ್ಟಿ ಹಿಡಿದ ಪೊಲೀಸ್ ಪಡೆ..

ಹುಬ್ಬಳ್ಳಿ ಗಾಂಜಾ ಮುಕ್ತ ಹುಧಾ ಅವಳಿನಗರಕ್ಕೆ ಪಣ ತೊಟ್ಡಿರುವ ಪೊಲೀಸ್ ಕಮೀಷನರೇಟ್ ಮತ್ತೊಂದು ಕಾರ್ಯಾಚರಣೆಯನ್ನು ಬೇಧಿಸಿದೆ. ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಬೆಂಡಿಗೇರಿ ಠಾಣೆ ಪೊಲೀಸರು ಬಂಧಿಸಿ, 2.50ಲಕ್ಷ ರೂ. ಮೌಲ್ಯದ 2.5 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಹು-ಧಾ ಪೊಲೀಸ್ ಕಮಿಷಮರ್ ಎನ್ ಶಶಿಕುಮಾರ್ ಹೇಳಿದರು.ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಓಡಿಸ್ಸಾ ಮೂಲದ ಕೇಶಬಚಂದ್ರ, ನೀಲಾಂಬರ ರಾವುತ್, ಉತ್ತರಖಂಡದ ಮಹ್ಮದಲಿ, ಹಾವೇರಿಯ ತೌಸಿಫ್ ಅಹ್ಮದ್, ಹುಬ್ಬಳ್ಳಿಯ ಪವನ , ಸಿದ್ಧಾರ್ಥ, ಮಂಜುನಾಥ, ನದೀಂ, ವಿಠ್ಠಲ, ಶಾನವಾಜ, ಗಣಪತಸಾ, ಕಾರ್ತಿಕ ಸೇರಿ 12 ಜನರನ್ನು ಬಂಧಿಸಲಾಗಿದೆ. ಅವರಿಂದ 5ಲಕ್ಷ ರೂ. ಮೌಲ್ಯದ ಕಾರು, ಎರಡು ತಲ್ವಾರ್, ಡ್ರ್ಯಾಗರ್, 10 ಮೊಬೈಲ್ ಪೋನ್‌ಗಳು ಹಾಗೂ 2ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ.ಗಬ್ಬೂರ ಕ್ರಾಸ್ ಬಳಿ ಆರೋಪಿಗಳನ್ನು ಕರೆದೊಯ್ದು ಪಂಚನಾಮೆ ನಡೆಸುತ್ತಿದ್ದಾಗ, ಕೇಶಬಚಂದ್ರ, ನೀಲಾಂಬರ ಮತ್ತು ತೌಸಿಫ ಎಂಬುವವರು ನಮ್ಮ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು. ಆ ವೇಳೆ ಸಿಸಿಬಿ ವಿಭಾಗದ ಪಾಟೀಲ ಮತ್ತು ಹೆದ್ದೇರಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಿಮ್ಸ್‌ಗೆ ದಾಖಲಿಸಲಾಗಿದೆ ಎಂದು ತಿಳಿಸಿದರು.ಇನ್ನೂ ಧಾರವಾಡದ ಕೋಳಿಕೇರಿ ನುಂಚ್ಚಬ್ಲಿ ಬಾವಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಖಚಿತ ಮಾಹಿತಿ ಮೇರೆಗೆ ಧಾರವಾಡದ ಶಹರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆಂಬ ವಿಷಯದ ಕುರಿತು ವಿವರಿಸಿದ ಹು-ಧಾ ಪೊಲೀಸ್ ಕಮೀಷನರ್, ಕೊಲ್ಲಾಪೂರದ ಸೈಫಲ್ಲಿ ಶಬ್ಬೀರ್ ಸುತಾರ್, ಸಂಕೇಶ್ವರ ಹತ್ತಿರದ ಸೊಲ್ಲಾಪುರದ ಸಂಕೇತ್ ಬಾಳು ಕೋತ್, ಧಾರವಾಡದ ಸಂದೀಪ್ ದಯಾನಂದ ಸಳಕೆ, ಹಜರತಲಿ ಮಕಾನಾದಾರ ಎಂಬವರು ಬಂಧಿತ ಆರೋಪಿ ಗಳಾಗಿದ್ದಾರೆಂದರು.ಇವರು ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದಿದ್ದು, ಈ ನಿಟ್ಟಿನಲ್ಲಿ ಆರೋಪಿತರಿಂದ 1942 ಗ್ರಾಂ ನಿಷೇಧಿತ ಮಾದಕ ವಸ್ತು ಗಾಂಜಾ, 1200 ನಗದು, ಎರಡು ಸ್ಮಾರ್ಟ್ ಫೋನ್, ಒಂದು ಬ್ಯಾಗ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಧಾರವಾಡ ಶಹರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಎನ್.ಸಿ.ಕಾಡದೇವರಮಠ ಇವರ ನೇತೃತ್ವದಲ್ಲಿ ಪ್ರಕರಣವನ್ನು ಬೇಧಿಸಲಾಗಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ಡಿಸಿಪಿಗಳಾದ ಮಹಾನಿಂಗ ನಂದಗಾವಿ, ರವೀಶ್ ಸಿ.ಆರ್ ಇದ್ದರು.ಬೈಟ್- ಎನ್ ಶಶಿಕುಮಾರ್ ,ಹು-ಧಾ ಪೊಲೀಸ್ ಕಮಿಷನರ್

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *