Breaking News

ಪೊಲೀಸ್ ಠಾಣೆಯಲ್ಲಿ 72 ಲಕ್ಷ ಹಣ ದುರ್ಬಳಕೆ ಆರೋಪ: ಇನ್ಸ್​ಪೆಕ್ಟರ್ ವಿರುದ್ಧ ತನಿಖೆಗೆ

ಬ್ಯಾಟರಾಯನಪುರ ಠಾಣೆಯಲ್ಲಿ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಇನ್ಸ್​ಪೆಕ್ಟರ್ ವಿರುದ್ಧ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು ಗೊಳಿಸಿ ಹೈಕೋರ್ಟ್ ಆದೇಶಿಸಿದೆ.. ವ್ಹೀಲಿಂಗ್ ಮಾಡೋದನ್ನ ಪ್ರಶ್ನಿಸಿದ್ದಕ್ಕೆ ಹಲ್ಲೆಗೆ ಯತ್ನ: ಬೆಂಗಳೂರಿನಲ್ಲಿ ಮಿತಿ ಮೀರಿದ ಪುಂಡರ ಹಾವಳಿ..! ಈ ಮೂಲಕ ಇನ್ಸ್​ಪೆಕ್ಟರ್ ಶಂಕರ್ ನಾಯ್ಕ್ ಸಂಕಷ್ಟ ಎದುರಾಗಿದೆ. ಕರ್ತವ್ಯದ ವೇಳೆ ಕಳ್ಳತನ ಪ್ರಕರಣವೊಂದರಲ್ಲಿ 72 ಲಕ್ಷ ರೂಪಾಯಿ ಜಪ್ತಿ ಮಾಡಿದ್ದ ಪೊಲೀಸ್​ ಶಂಕರ್ ನಾಯ್ಕ್, ಈ ಹಣವನ್ನು ಸರ್ಕಾರದ ಖಜಾನೆ ಅಥವಾ ಠಾಣೆಯ ಸುಪರ್ದಿಗೆ ಕೊಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ ಶಂಕರ್ ಹಾಗೂ ಮಧ್ಯವರ್ತಿ ಲೋಕನಾಥ್ ವಿರುದ್ಧ ಎಸಿಪಿ ಭರತ್ ರೆಡ್ಡಿ ನೀಡಿದ್ದ ದೂರು ಆಧರಿಸಿ 2023ರ ನವೆಂಬರ್​ನಲ್ಲಿ ಎಫ್​ಐಆರ್​ ದಾಖಲಾಗಿತ್ತು.ಎಫ್​ಐಆರ್​ ದಾಖಲಾಗುತ್ತಿದ್ದಂತೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿಸಲಾಗಿತ್ತು. ಬಳಿಕ ಪ್ರಕರಣ ರದ್ದು ಕೋರಿ ಇನ್ಸ್​ಪೆಕ್ಟ್​ರ್​ ಶಂಕರ್ ನಾಯ್ಕ್ ಹೈಕೋರ್ಟ್ ಮೆಟ್ಟಲೇರಿದ್ದರು. ನಂತರ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿತ್ತು. ಆದರೆ, ತಡೆಯಾಜ್ಞೆ ತೆರವುಗೊಳಿಸುವಂತೆ ಸಿಸಿಬಿ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನೆಲೆ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಇದೀಗ ಹೈಕೋರ್ಟ್ ತೆರವುಗೊಳಿಸಿದೆ.

Share News

About Shaikh BigTv

Check Also

ಬೆಂಗಳೂರಿನಲ್ಲಿ ನಡೆದ ಸ್ಫೋಟ ಪ್ರಕರಣ: ಜಲಾಲ್ ನ ಬಂಧನ !

ಬೆಂಗಳೂರು: ಪುಲಿಕೇಶಿನಗರದ ಜರ್ಮಿಯಾ ರಸ್ತೆಯ ಕಟ್ಟಡವೊಂದರಲ್ಲಿ ಅ.20ರಂದು ಸಂಭವಿಸಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನ ಜಲಾಲ್ (25) ಎಂಬ ಯುವಕನನ್ನು …

Leave a Reply

Your email address will not be published. Required fields are marked *