Breaking News

ಅ. 12ರಂದು ಕಲಘಟಗಿ ತಾಲುಕಾ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಕಲಘಟಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಲಘಟಗಿ ತಾಲುಕಾ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ದಿ. ೧೩ ರ ಮಂಗಳವಾರ ಬೆಳಿಗ್ಗೆ ೧೧ ಗಂಟೆಗೆ ಇಲ್ಲಿನ ಹನ್ನೆರಡುಮಠದ ಸಭಾಭವನದಲ್ಲಿ ಜರುಗಲಿದೆ.

ಹನ್ನೆರಡುಮಠದ ಶ್ರೀ ರೇವಣಸಿದ್ಧ ಶಿವಾಚಾರ್ಯರ ಸಾನಿಧ್ಯದಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಂಘಟನೆಯ ರಾಜ್ಯಾಧ್ಯಕ್ಷ ಡಾ/ ವಾಸುದೇವ ಮೇಟಿ ಅಧ್ಯಕ್ಷತೆ ವಹಿಸುವರು.

ಜಿಲ್ಲಾಧ್ಯಕ್ಷ ಸಿದ್ದಯ್ಯ ಕಟ್ಟೂರಮಠ ಸೇರಿದಂತೆ ಸಂಘಟನೆಯ ರಾಜ್ಯ ಹಾಗೂ ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅನುಷ್ಠಾನ ಅಧಿಕಾರಿಗಳು ಹಾಗೂ ಇನ್ನಿತರರು ಪಾಲ್ಗೊಳ್ಳಲಿರುವರೆಂದು ನೂತನ ತಾಲುಕಾಧ್ಯಕ್ಷ ಬಸವರಾಜ ರೊಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About Shaikh BigTv

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *