Breaking News

ಹುಬ್ಬಳ್ಳಿ ಪೋಲಿಸರ ಭರ್ಜರಿ ಕಾರ್ಯಚರಣೆ: 9 ಜನ ಬಂಧನ

ಹುಬ್ಬಳ್ಳಿ: ಬೆಳ್ಳಂಬೆಳಿಗ್ಗೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ 9 ಜನರನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಹೌದು..ಹುಬ್ಬಳ್ಳಿ ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಪೊಲೀಸರಿಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ಆನಂದನಗರ ಕುಷ್ಠರೋಗ ಆಸ್ಪತ್ರೆಯ ಎದುರಿಗೆ ಇರುವ ಶೆಡ್ ಹತ್ತಿರ ಗಾಂಜಾ ಮಾದಕ ಪದಾರ್ಥವನ್ನು ಮಾರಾಟ ಮಾಡುತ್ತಿದ್ದ 9 ಜನ ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದು, ಬಂಧಿತರಿಂದ 1.25 ಲಕ್ಷ ಮೌಲ್ಯದ 1,500 ಗ್ರಾಂ ಗಾಂಜಾ 06 ಮೊಬೈಲ್, 2000 ನಗದು ವಶಕ್ಕೆ ಪಡೆದಿದ್ದಾರೆ.

ಆಸ್ಪಕ ಮುಲ್ಲಾ, ಶಿವಕುಮಾರ@ಶಿವ್ಯಾ@ಮಚ್ಚೆ ತುಮಕೂರ, ಇಕ್ಬಾಲ್ ಅಹ್ಮದ@ಸಾಹೇಬ್ ಮುದಗಲ್, ಆರೀಫ@ಚರಕ ಗಲಗಲಿ, ಅಭಿಷೇಕ ದೇವಮಾನೆ, ಅಮೃತ ಹವಳದ, ಮೊಹ್ಮದರೆಹಾನ್ ಗೋಕಾಕ, ಸಾಧಿಕ ಕಿತಾಬ್‌ವಾಲೆ, ಮೆಹಬೂಬ ಸಾಬ್ ಡೌಗಿ ಮಕಂದಾರ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.

Share News

About Shaikh BigTv

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *