ಧಾರವಾಡ:ಕುಡಿಯಲು ನೀರು ಇಲ್ಲ ಎಂದು ಆಕ್ರೋಶಗೊಂಡ ಧಾರವಾಡ ತಾಲೂಕಿನ ಸೋಮಾಪುರ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಕಳೆದ ಒಂದು ತಿಂಗಳಿನಿಂದ ಸರಿಯಾಗಿ ಸೋಮಾಪುರ ಗ್ರಾಮದಲ್ಲಿ ನೀರು ಪೂರೈಕೆ ಆಗುತ್ತಿಲ್ಲ, ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಈ ಕುರಿತು ಹಲವಾರು ಭಾರಿ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾ ನಿರತ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

