ಧಾರವಾಡ : ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಧಾರವಾಡ ಪ್ರಾದೇಶಿಕ ಪತ್ರಗಾರ ಇಲಾಖೆಯಿಂದ ಸ್ವಾತಂತ್ರ್ಯ ಸಂಭ್ರಮಾಚರಣೆ ನಿಮಿತ್ತ ಎರಡು ದಿನಗಳವರೆಗೆ ಐತಿಹಾಸಿಕ ದಾಖಲೆ ಹಾಗೂ ಛಾಯಾಚಿತ್ರಗಳ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಶಾಸಕ ಅರವಿಂದ ಬೆಲ್ಲದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಶಾಸಕ ಎನ್. ಎಚ್. ಕೋನರಡ್ಡಿ, ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

