Breaking News

ಸಾರ್ವಜನಿಕ ಗ್ರಂಥಾಲಯಕ್ಕೆ ಸುಧಾ ಮೂರ್ತಿ ಭೇಟಿ

ತಾಳಿಕೋಟೆ: ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷೆ ಹಾಗೂ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಪಟ್ಟಣದ ಕನ್ನಡ ಮಾದರಿ ಶಾಲಾ ಆವರಣದಲ್ಲಿನ ಸಾರ್ವಜನಿಕ ಗ್ರಂಥಾಲಯಕ್ಕೆ ಭೇಟಿ ನೀಡಿದರು.

ಈಗಾಗಲೇ ಇರುವ ಕಟ್ಟಡವನ್ನು ವಿಸ್ತರಿಸಿ ನಿರ್ಮಿಸಿ ಅಲ್ಲಿ ಮೂಲ ಸೌಲಭ್ಯಗಳಾದ ಶೌಚಾಲಯ, ಕುಡಿಯುವ ನೀರು, ಓದಲು ಸುಸಜ್ಜಿತವಾದ ಕೊಠಡಿ, ಕಂಪ್ಯೂಟರ್‌ಗಳನ್ನು ಅಳವಡಿಸುವ ಕಾರ್ಯವನ್ನು ಫೌಂಡೇಷನ್ ಮೂಲಕ ಮಾಡಿಕೊಡಲಾಗುವುದು ಎಂದರು.

ಈಗಾಗಲೇ ರಾಜ್ಯದಲ್ಲಿ ಸುಮಾರು 70,000 ಸಾರ್ವಜನಿಕ ಗ್ರಂಥಾಲಯಗಳನ್ನು ಫೌಂಡೇಷನ್ ಮೂಲಕ ನಿರ್ಮಿಸಿ ಕೊಡಲಾಗಿದೆ. ಆಗಸ್ಟ್ 12 ಅಂತರರಾಷ್ಟ್ರೀಯ ಗ್ರಂಥ ಪಾಲಕರ ದಿನಾಚರಣೆ ಆಗಿರುವುದರಿಂದ ಈ ದಿನದಂದು ವಿಜಯಪುರ ಜಿಲ್ಲೆಯ ಕೆಲವು ತಾಲ್ಲೂಕುಗಳಲ್ಲಿ ಪ್ರವಾಸ ನಡೆಸಿ ಸಾರ್ವಜನಿಕ ಗ್ರಂಥಾಲಯಗಳ ಸ್ಥಿತಿಗತಿಗಳನ್ನು ಫೌಂಡೇಷನ್‌ ಮೂಲಕ ತಿಳಿದುಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ತಹಶೀಲ್ದಾರ್‌ ಕೀರ್ತಿ ಚಾಲಕ್, ಪುರಸಭೆ ಮುಖ್ಯಾಧಿಕಾರಿ ಮೋಹನ್ ಜಾದವ್, ಶಿರಸ್ತೆದಾರ ಜೆ.ಆರ್.ಜೈನಾಪೂರ, ಸಿಆರ್ ಪಿ ರಾಜು ವಿಜಾಪೂರ, ಲೆಕ್ಕಾಧಿಕಾರಿ ಸಿದ್ದಲಿಂಗ ಪಾಟೀಲ, ಎಂ.ಎಂ. ಅತ್ತಾರ ಇದ್ದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *