ಬೆಂಗಳೂರು: ಸೆಪ್ಟೆಂಬರ್ ತಿಂಗಳಿನಿಂದ ಪೋಡಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು, ಲಕ್ಷಾಂತರ ರೈತರಿಗೆ ಅವರ ಜಮೀನಿನ ಹಕ್ಕನ್ನು ಅವರಿಗೆ ನೀಡುವ ಮೂಲಕ ನೆಮ್ಮದಿಯ ಬದುಕು ಕಲ್ಪಿಸಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಸೋಮವಾರ ವಿಕಾಸಸೌಧದ ನಾಲ್ಕನೇ ಮಹಡಿಯ ಸಭಾಂಗಣದಲ್ಲಿ ಬೆಂಗಳೂರು ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿತ್ತು. ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಸಾಗುವಳಿ ಮಾಡುವ ರೈತರಿಗೆ ಮಂಜೂರು ಮಾಡಿರುವ ಲಕ್ಷಾಂತರ ಪ್ರಕರಣಗಳಲ್ಲಿ ಹಲವು ವರ್ಷಗಳಿಂದ ಪೋಡಿ ದುರಸ್ಥಿಯಾಗಿಲ್ಲ. ಈ ಹಿಂದಿನ ಸರ್ಕಾರದ ಅವಧಿಯಲ್ಲೂ ಹತ್ತಾರು ಚರ್ಚೆ, ನಾನಾ ಪ್ರಯತ್ನಗಳಾಗಿದ್ದರೂ ಈ ವಿಚಾರದಲ್ಲಿ ಸರಿಯಾದ ಪರಿಹಾರ ನೀಡಲು ಸಾಧ್ಯವಾಗಿಲ್ಲ. ಆದರೆ, ರೈತರಿಗೆ ಅವರ ಜಮೀನಿನ ಹಕ್ಕನ್ನು ಸಂಪೂರ್ಣವಾಗಿ ಅವರಿಗೇ ನೀಡಲು, ಈ ವಿಚಾರದಲ್ಲಿ ಶಾಶ್ವತ ಪರಿಹಾರ ನೀಡಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ” ಎಂದು ಭರವಸೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

