Breaking News

ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ

ಹುಬ್ಬಳ್ಳಿ: ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ಸ್ಥಾನಿಕ ವೈದ್ಯರ ಸಂಘದ (ಕೆಆರ್‌ಡಿ) ನೇತೃತ್ವದಲ್ಲಿ ರಾಜ್ಯವ್ಯಾಪಿ ನಡೆದ ಮುಷ್ಕರದಲ್ಲಿ ಕಿಮ್ಸ್ ಆಸ್ಪತ್ರೆ ಕಿರಿಯ ವೈದ್ಯರು ಸಹ ಪಾಲ್ಗೊಂಡರು. ವಿನೂತನ ರೀತಿಯಲ್ಲಿ ಹೋರಾಟ ನಡೆಸಿದರು.

ತುರ್ತು ಚಿಕಿತ್ಸಾ ಘಟಕ, ಹೃದಯ ರೋಗ ವಿಭಾಗ ಹೊರತುಪಡಿಸಿ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಯಾರೂ ತೆರಳಲಿಲ್ಲ. ಸುಮಾರು 600 ಕಿರಿಯ ವೈದ್ಯರು ಸೇವೆಯಿಂದ ದೂರ ಉಳಿದಿದ್ದು, ಬೃಹತ್ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಇನ್ನೂ ಸುಡುವ ಬಿಸಿಲಿನಲ್ಲಿಯೇ ವೈದ್ಯರು ಹೋರಾಟಕ್ಕೆ ಮುಂದಾಗಿದ್ದು, ಚೆನ್ನಮ್ಮ ವೃತ್ತದ ಬಳಿಯಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಕೂಡಲೇ ಸರ್ಕಾರ ಎಚ್ಚೇತ್ತುಕೊಳ್ಳಬೇಕು ಇಲ್ಲವಾದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.

Share News

About Shaikh BigTv

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *