ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ವಾಪಸ್ ತೆರಳುವ ಮೊದಲು ಮಾಜಿ ಸಂಸದ ಸಂಗಣ್ಣ ಕರಡಿ ಅವರ ಇಲ್ಲಿನ ನಿವಾಸದಲ್ಲಿ ಭೋಜನ ಸವಿದರು.
ಬಿಜೆಪಿಯಿಂದ ಎರಡು ಬಾರಿ ಸಂಸದರಾಗಿದ್ದ ಸಂಗಣ್ಣ ಕರಡಿ ಅವರು ಹಿಂದಿನ ಲೋಕಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಸೇರಿದ್ದರು. ಇದಾದ ಬಳಿಕ ಸಿದ್ದರಾಮಯ್ಯ ಮೊದಲ ಬಾರಿಗೆ ಸಂಗಣ್ಣ ಕರಡಿ ಅವರ ಮನೆಗೆ ಮೊದಲ ಬಾರಿಗೆ ಭೇಟಿ ನೀಡಿದರು. ಸಿ.ಎಂ. ವಾಪಸ್ ಹೊರಡುವಾಗ ಸಂಗಣ್ಣ ಕುಟುಂಬದವರ ಜೊತೆ ಫೋಟೊ ತೆಗೆಯಿಸಿಕೊಂಡರು. ಈ ವೇಳೆ ಕುಟುಂಬದವರು ಕಿನ್ನಾಳ ಕಲೆಯಲ್ಲಿ ಸಿದ್ದರಾಮಯ್ಯ ಭಾವಚಿತ್ರವಿರುವ ಕಲಾಕೃತಿಯನ್ನು ಉಡುಗೊರೆಯಾಗಿ ನೀಡಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಶಾಸಕ ಬಸವರಾಜ ರಾಯರಡ್ಡಿ, ಶಾಸಕ ರಾಘವೇಂದ್ರ ಹಿಟ್ನಾಳ, ಸಂಸದ ರಾಜಶೇಖರ ಹಿಟ್ನಾಳ, ವಿವಿಧ ಕ್ಷೇತ್ರಗಳ ಶಾಸಕರು ಹಾಗೂ ಅಧಿಕಾರಿಗಳು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





