Breaking News

ಕಾರು ಡಿಕ್ಕಿಯಾಗಿ ಓರ್ವ ಸಾವು

ಚಾಮರಾಜನಗರ: ಇಬ್ಬರು ಸ್ನೇಹಿತರು ಗುಂಡ್ಲುಪೇಟೆ ತಾಲೂಕಿನ‌ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಕಾರು ಡಿಕ್ಕಿಯಾಗಿ ಓರ್ವ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆಯ ಹಂಗಳ ರಸ್ತೆಯಲ್ಲಿ ನಡೆದಿದೆ.

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿ‌ನ ಗಣೇಶ್ (23) ಎಂಬಾತ ಮೃತಪಟ್ಟ ಬೈಕ್ ಸವಾರನಾಗಿದ್ದು, ಈತನ ಸ್ನೇಹಿತ ಈ ವೇಳೆ ಅಪಘಾತದಲ್ಲಿ ಪಾರಾದ ಘಟನೆ ನಡೆದಿದೆ

ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಹಿಂಬದಿ ಸವಾರ ಮೂತ್ರ ವಿಸರ್ಜನೆ ಮಾಡಬೇಕೆಂದು ರಸ್ತೆ ಪಕ್ಕಕ್ಕೆ ತೆರಳಿದ್ದಾಗ ಕೇರಳ ಮೂಲದ ಕಾರು ನಿಂತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ‌. ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಬೈಕ್‌ನಲ್ಲಿ ಕುಳಿತಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ‌. ಇನ್ನು ಮೂತ್ರ ವಿಸರ್ಜನೆಗೆ ತೆರಳಿದ್ದ ಈತನ ಸ್ನೇಹಿತ ಪ್ರಾಣಾಪಾಯದಿಂದ ಪಾರಾಗಿದ್ದಾನೆ‌ ಎಂದು ತಿಳಿದುಬಂದಿದೆ.ಇನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಕಾರು, ಬೈಕ್ ಎರಡನ್ನೂ ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *