Breaking News

ಮಹಿಳೆಗೆ ಚಾಕು ಇರಿದು ಹತ್ಯೆ

ಬೆಂಗಳೂರು: ಖಾಲಿ ಜಾಗದಲ್ಲಿ ಮಹಿಳೆಯೊಬ್ಬರನ್ನು ಚಾಕುವಿನಿಂದ ಇರಿದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೆಂಗೇರಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.

ಗೌರಿ (30) ಕೊಲೆಯಾದ ಮಹಿಳೆ.ಪಿರಿಯಾಪಟ್ಟಣದಲ್ಲಿದ್ದ ಗೌರಿ ಒಂದು ವಾರದ ಹಿಂದೆಯಷ್ಟೇ ಇಲ್ಲಿಗೆ ಬಂದಿದ್ದರು. ಈ ನಡುವೆ ರಾತ್ರಿ ಜಟಗರಹಳ್ಳಿಯ ಖಾಲಿ ಜಾಗದಲ್ಲಿ ಈ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.

ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಸುದ್ದಿ ತಿಳಿದು ಕೆಂಗೇರಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈಕೆಯ ಗಂಡನೇ ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *