Breaking News

ರಸ್ತೆಗಳಿಗೆ ಸ್ವಾತಂತ್ರ್ಯ ಹೋರಾಟಗಾರರು ಹೆಸರು ಇಡುವಂತೆ ಮನವಿ ಸಲ್ಲಿಕೆ

ಕುಂದಗೋಳ : ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಕೇಂದ್ರ ಸ್ಥಾನವಾದ ಕುಂದಗೋಳ ನಗರದಲ್ಲಿ ಕೇವಲ ಬೆರಳೆಣಿಕೆಯಷ್ಟು ಸ್ವಾತಂತ್ರ್ಯ ಹೋರಾಟಗಾರರ ಪುತ್ಥಳಿ ನಿರ್ಮಾಣವಾಗಿವೆ.ಬೀದಿಗಳಿಗೆ ಹೋರಾಟಗಾರರ ಹೆಸರು ಇಡಬೇಕು ಎಂದು ಭಾರತೀಯ ಜನತಾ ಪಕ್ಷ ಯುವ ಮೋರ್ಚಾ ವತಿಯಿಂದ ಮನವಿ ಪತ್ರ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಕುಂದಗೋಳ ತಾಲೂಕಿನ ಕೇಂದ್ರ ಸ್ಥಾನವಾದ ಕುಂದಗೋಳ ಪಟ್ಟಣದಲ್ಲಿ ಪ್ರಥಮ ಸ್ವಾತಂತ್ರ್ಯ ಹೋರಾಟಗಾರರಾದ ಕಿತ್ತೂರಿನ ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಮತ್ತು ಕ್ರಾಂತಿಕಾರಿಗಳಾದಂತಹ ಸುಭಾಸ ಚಂದ್ರ ಭೋಸ ಮತ್ತು ಭಗತಸಿಂಗ್ ಛತ್ರಪತಿ ಶಿವಾಜಿ ಮಹಾರಾಜರ ಹೆಸರುಗಳನ್ನು ಪ್ರಮುಖ ಬೀದಿಗಳಿಗೆ ನಾಮಕರಣ ಮಾಡುವುದಾಗಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ತಾಲೂಕಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಬಸವರಾಜ ಚಿಕ್ಕಹರಕುಣಿ ಮತ್ತು ತಾಲ್ಲೂಕಿನ ಯುವಮೋರ್ಚಾ ತಾಲ್ಲೂಕಾ ಪ್ರಧಾನ ಕಾರ್ಯದರ್ಶಿಗಳಾದ ಬಸವರಾಜ ಕೋಳಿವಾಡ ರಮೇಶ ಬೆನಕಣ್ಣನವರ ಪ್ರಮುಖ ಪದಾಧಿಕಾರಿಗಳಾದ ಪ್ರದೀಪ ಕಾಳೆ, ಸಿದ್ದು ಧಾರವಾಡ ಶೆಟ್ಟರು, ಗಿರೀಶ ಗದಗಿನ, ಮಂಜುನಾಥ ಭಂಡಿವಾಡ, ಸಾಗರ ಮಳಲಿ ಉಪಸ್ಥಿತರಿದ್ದರು.

Share News

About Shaikh BigTv

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *