Breaking News

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಉಪಾಧ್ಯಕ್ಷರಾಗಿ ಪೀರಸಾಬ್ ಕೌತಾಳ ನೇಮಕ

ಧಾರವಾಡ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಉಪಾಧ್ಯಕ್ಷರಾಗಿ ಪೀರಸಾಬ್ ಕೌತಾಳ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಹುಬ್ಬಳ್ಳಿಯ ಗೋಕುಲ ರಸ್ತೆಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಗೆ ಆಗಮಿಸಿದ ಪೀರಸಾಬ್ ಅವರು ಅಲ್ಲಿ ತಮ್ಮ ಅಧಿಕಾರ ವಹಿಸಿಕೊಂಡರು.

ಪೀರಸಾಬ್ ಅವರು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಅವರ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಪೀರಸಾಬ್‌ ಕೌತಾಳ ಅವರನ್ನು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ನೂರ್ ಅಹ್ಮದ್ ನದಾಫ್ ಅವರು ಹೂಗುಚ್ಛ ನೀಡುವ ಮೂಲಕ ಅಭಿನಂದಿಸಿದರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *