ನವಲಗುಂದ: ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಅವರ ತ್ಯಾಗ ಮತ್ತು ಬಲಿದಾನವನ್ನು ಪ್ರತಿಯೊಬ್ಬರು ಸ್ಮರಿಸಬೇಕೆಂದು ಸಮಾಜ ಸೇವಕ ಮಾಬುಸಾಬ ಯರಗುಪ್ಪಿ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಸರ್ಕಾರಿ ಮಾದರಿ ಕೇಂದ್ರ ಶಾಲೆ ನಂ-3ರಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸಾವಿರಾರು ಮಹನೀಯರ ಹೋರಾಟದ ಫಲವಾಗಿ ಇಂದು ನಾವು ಎಪ್ಪತ್ತೆಂಟನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡುತ್ತಿದ್ದು, ಮಹಾತ್ಮರ ತ್ಯಾಗ ಬಲಿದಾನದಿಂದ ಸಿಕ್ಕಿರುವಂತಹ ಪವಿತ್ರವಾದ ಸ್ವಾತಂತ್ರ್ಯವನ್ನು ಅದ್ದೂರಿಯಾಗಿ ಆಚರಣೆ ಮಾಡುವುದರ ಜೊತೆಗೆ ನಮ್ಮ ಹಿರಿಯರು ಹಾಕಿಕೊಟ್ಟ ಮಾರ್ಗದರ್ಶನದ ಅಡಿಯಲ್ಲಿ ಭಾರತ ದೇಶವನ್ನು ಬಲಾಡ್ಯ ರಾಷ್ಟ್ರವನ್ನಾಗಿ ಮಾಡಲು ಎಲ್ಲರೂ ಶ್ರಮಿಸಬೇಕೆಂದರು.
ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಮುತ್ತಪ್ಪ ಬಿಸನಾಳ ಧ್ವಜಾರೋಹಣ ಮಾಡಿದರು, ಸಿ.ಎ ಆನಂದ ಶಾಲೆಯ ಇಪ್ಪತ್ತು ಮಕ್ಕಳಿಗೆ ಕ್ರೀಡಾ ಸಮವಸ್ತ್ರ ದೇಣಿಗೆಯಾಗಿ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

