Breaking News

ಶೃಂಗೇರಿ ಶಾರದಾ ಪೀಠದಲ್ಲಿ ಇಂದಿನಿಂದ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು : ಶೃಂಗೇರಿ ಶಾರದಾ ಪೀಠದಲ್ಲಿ ಇಂದಿನಿಂದ ವಸ್ತ್ರ ಸಂಹಿತೆ ಜಾರಿಯಾಗಿದೆಇಂದಿನಿಂದಲೇ ಈ ವಸ್ತ್ರ ಸಂಹಿತೆಯನ್ನು ಜಾರಿಗೆ ತರಲಾಗಿದೆ. ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ 20 ದಿನಗಳ ಹಿಂದೆ ಆದೇಶ ಹೊರಡಿಸಿತ್ತು. ಆದರೆ ಇಂದಿನಿಂದ ಈ ನೀತಿ ಜಾರಿಗೆ ಬಂದಿದೆ.

ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.ಇಲ್ಲಿ ಶಾರದಾ ಪೂಜೆ,ಅಕ್ಷರಾಭ್ಯಾಸ ಮಾಡಿಸಿದರೆ ಮಕ್ಕಳ ವಿದ್ಯಾಭ್ಯಾಸ ಅಡೆ ತಡೆಯಿಲ್ಲದೆ ಮುಂದುವರಿಯುತ್ತದೆ ಎನ್ನುವ ನಂಬಿಕೆಯಿದೆ.ಇದೀಗ ಶೃಂಗೇರಿ ಶಾರದಾ ಪೀಠಕ್ಕೆ ಬರುವ ಭಕ್ತರಿಗಾಗಿ ವಸ್ತ್ರ ಸಂಹಿತೆಯನ್ನು ಜಾರಿಗೆ ಮಾಡಲಾಗಿದೆ.

ವಸ್ತ್ರ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಪಂಚೆ, ಶಲ್ಯ,ದೋತಿ, ಸೀರೆಯಲ್ಲಿ ಪೀಠಕ್ಕೆ ಭಕ್ತರು ಬರುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ದೇವಾಲಯ ಆವರಣ ಭಾರತೀಯ ಸಂಸ್ಕೃತಿಯ ತಾಣವಾಗಿತ್ತು.20 ದಿನದ ಹಿಂದೆ ಈ ವಿಚಾರಕ್ಕೆ ಸಂಬಂಧಿಸಿದಂತೆ ದೇವಾಲಯ ಆಡಳಿತ ಮಂಡಳಿ ಆದೇಶ ಹೊರಡಿಸಿತ್ತು.ದೇವರು,ಗುರುಗಳ ದರ್ಶನಕ್ಕೆ ಬರುವವರು ಸಾಂಪ್ರಾದಾಯಿಕ ಉಡುಗೊರೆಯಲ್ಲಿರುವಂತೆ ಸೂಚನೆ ನೀಡಲಾಗಿದೆ.ಇಂದಿನಿಂದ ವಸ್ತ್ರ ಸಂಹಿತೆ ಅಧಿಕೃತವಾಗಿ ಜಾರಿಗೆ ಬಂದಿದೆ.ದೇವಾಲಯ ಜಾರಿಗೊಳಿಸಿದ ವಸ್ತ್ರ ಸಂಹಿತೆ ಪದ್ಧತಿಯನ್ನು ಭಕ್ತವೃಂದ ಕೂಡಾ ಸ್ವಾಗತಿಸಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *