ಬೆಂಗಳೂರು:- ಇಂದಿನಿಂದ ಮೂರು ದಿನ ರಾಜ್ಯದಾದ್ಯಂತ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಕೊಟ್ಟಿದೆ.
ದಕ್ಷಿಣ ಒಳನಾಡಿನ ರಾಮನಗರದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಮತ್ತು ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಇನ್ನೂ ಉತ್ತರ ಒಳನಾಡಿನಲ್ಲಿ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ.
ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

