Breaking News

‘ಈಸೂರು’ ಸ್ವಯಂ ಸ್ವಾತಂತ್ರ್ಯ ಘೋಷಿಸಿಕೊಂಡ ಗ್ರಾಮ

ಶಿವಮೊಗ್ಗ: 78ನೇ ಸ್ವಾತಂತ್ರ್ಯ ದಿನಾಚರಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ‘ಏಸೂರು ಕೊಟ್ಟರು ಈಸೂರು ಕೊಡೆವು’ ಎಂದು ಭಾರತದಲ್ಲಿ ಮೊಟ್ಟ ಮೊದಲು ಸ್ವಾತಂತ್ರ್ಯ ಘೋಷಿಸಿಕೊಂಡ ಹಳ್ಳಿ ಈಸೂರು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಈಸೂರು ಗ್ರಾಮದ ಜನರು ಬ್ರಿಟಿಷರಿಗೆ ಸೆಡ್ಡು ಹೊಡೆದು, ಅವರೊಂದಿಗೆ ಕಾದಾಡಿ ವೀರ ಮರಣ ಹೊಂದಿದ್ದಾರೆ. ಈಸೂರು ಸ್ವಾತಂತ್ರ್ಯ ಹೋರಾಟದಲ್ಲಿ 11 ಜನರನ್ನು ಗಲ್ಲಿಗೇರಿಸಲಾಯಿತು ಮತ್ತು 23 ಜನರಿಗೆ ಜೀವಾವಧಿ ಶಿಕ್ಷೆಯನ್ನು ಘೋಷಿಸಲಾಯಿತು. ಸ್ವಾತಂತ್ರ್ಯ ಚಳಿವಳಿಯಲ್ಲಿ ತ್ಯಾಗ ಬಲಿದಾನಕ್ಕೆ ಈಸೂರು ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿಯಾಯಿತು.

Share News

About BigTv News

Check Also

ಅಮಾಯಕರಿಗೆ ಕಳ್ಳರ ಪಟ್ಟ ಕಟ್ಟಿ ಥಳಿತ – ಮಾರಣಾಂತಿಕ ಹಲ್ಲೆ!

ಬೆಂಗಳೂರು: ವಾಹನ ಅಡ್ಡ ಬಂದ ವಿಚಾರಕ್ಕೆ ರಸ್ತೆಯಲ್ಲಿ ಜಗಳವಾಡುತ್ತಿದ್ದ ಇಬ್ಬರು ಯುವಕರನ್ನು ಕಳ್ಳರೆಂದು ಭಾವಿಸಿ ಸ್ಥಳೀಯರು ಅಟ್ಟಾಡಿಸಿ ಹಲ್ಲೆ ನಡೆಸಿದ …

Leave a Reply

Your email address will not be published. Required fields are marked *