Breaking News

ದೇಶಾದ್ಯಂತ ನಾಳೆ ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಸೇವೆಯಲ್ಲಿ ವ್ಯತ್ಯ

ದೇಶಾದ್ಯಂತ ನಾಳೆ ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ OPD ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ.

ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (IMA) ದೇಶಾದ್ಯಂತ ಖಾಸಗಿ ಆಸ್ಪತ್ರೆ ಬಂದ್ ಮಾಡಲು ಕರೆ ನೀಡಲಾಗಿದೆ. ಕೊಲ್ಕತ್ತಾದ ಆ‌ರ್.ಜಿ ಕರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯನ್ನು ಅಮಾನುಷವಾಗಿ ಹತ್ಯೆ ಮಾಡಲಾಗಿದೆ. ಈ ಪ್ರಕರಣವನ್ನು ಖಂಡಿಸಿ ಪಶ್ಚಿಮ ಬಂಗಾಳ ಸೇರಿದಂತೆ ದೇಶದ ಮೂಲೆ, ಮೂಲೆಯಲ್ಲೂ ಪ್ರತಿಭಟನೆ ನಡೆಸಲಾಗುತ್ತಿದೆ. ಕೊಲೆಗೆ ಕಾರಣರಾದರನ್ನು ಶೀಘ್ರವೇ ಗಲ್ಲುಶಿಕ್ಷೆಗೆ ಗುರಿ ಮಾಡಲು ಆಗ್ರಹಿಸಲಾಗುತ್ತಿದೆ.

ಕೊಲ್ಕತ್ತಾ ವೈದ್ಯೆಯ ಕೊಲೆ ಪ್ರಕರಣವನ್ನು ಖಂಡಿಸಿ ನಾಳೆ ದೇಶಾದ್ಯಂತ ಖಾಸಗಿ, ಸರ್ಕಾರಿ ಆಸ್ಪತ್ರೆಗಳನ್ನು ಬಂದ್ ಮಾಡಲಾಗುತ್ತಿದೆ. ಆಸ್ಪತ್ರೆಗಳ ಓಪಿಡಿ, ಶಸ್ತ್ರಚಿಕಿತ್ಸೆಯ ಸೇವೆಯೂ ಸ್ಥಗಿತವಾಗಲಿದೆ. ಇಂಡಿಯನ್ ಮೆಡಿಕಲ್ ಅಸೋಸಿಯೇಷನ್‌ ಅಧ್ಯಕ್ಷ ವಿನಯ್ ಅಗರವಾಲ್ ಅವರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *