Breaking News
Featured Video Play Icon

ಯಡಿಯೂರಪ್ಪನವರಂತೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಬದ್ದತೆ ಪ್ರದರ್ಶಿಸಲಿ- ಜೋಶಿ

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಪ್ರಾಸಿಕ್ಯೂಷನ್ ಅನುಮತಿ ಕೊಡಲು ರಾಜ್ಯಪಾಲರು ಸಮಯಾವಕಾಶ, ತಜ್ಞರ ಸಲಹೆ ಪಡೆದು ಸಮಗ್ರ ತನಿಖೆಗೆ ಅನುಮತಿ ಕೊಟ್ಟಿದ್ದಾರೆ. ರಾಜ್ಯಪಾಲರ ಈ ಕ್ರಮ ಸರಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಈ ಕ್ರಮ ಸಾರ್ವಜನಿಕ ಜೀವನದಲ್ಲಿರುವ ಯಾವುದೇ ವ್ಯಕ್ತಿ ಶುದ್ದತೆ ಕಾಪಾಡಿಕೊಳ್ಳುವುದಕ್ಕೆ ಬಹುದೊಡ್ಡ ಹೆಜ್ಜೆಯಾಗಿದೆ. ಯಾರೇ ಇದ್ದರೂ ಸಹ ಉನ್ನತ ಸ್ಥಾನದಲ್ಲಿದವರ ಮೇಲೆ ಆರೋಪ ಬಂದಾಗ ತನಿಖೆ ಹಾಗೂ ಕ್ರಮಗಳಾಗಬೇಕು. ಸಾರ್ವಜನಿಕ ಜೀವನದಲ್ಲಿದವರು ಭ್ರಷ್ಟಾಚಾರ ಅಥವಾ ತಪ್ಪು ಮಾಡಿಬೇಕಾದರೇ ಭಯ ಇರಬೇಕು. ರಾಜ್ಯಪಾಲರು ಅಳೆದು ತೂಗಿ ಪ್ರಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ತನಿಖೆಗೆ ಸಂಪೂರ್ಣ ಸಹಕಾರ ಕೊಡುತ್ತಾರೆಂದು ಭಾವಿಸಿದ್ದೇನೆ. ಯಾಕೆಂದರೆ ಸಿದ್ದರಾಮಯ್ಯ ತಾವು ಸ್ವಚ್ಛ ಹಾಗೂ ತೆರೆದ ಪುಸ್ತಕದಂತಿದ್ದೇನೆ ಎಂದು ಹೇಳುತ್ತಿದ್ದಾರೆ. ಅವರು ತಪ್ಪು ಮಾಡಿಲ್ಲ ಎಂದರೆ ಏನೂ ಭಯಪಡುವ ಅವಶ್ಯಕತೆ ಇಲ್ಲ. ತನಿಖೆಗೆ ಅಡೆತಡೆ ಮಾಡದೇ ಸಹಕಾರ ನೀಡಬೇಕೆಂದರು.

ಸಿದ್ದರಾಮಯ್ಯ ಕಾನೂನು ಹೋರಾಟ ಮಾಡಲು ಸ್ವಾತಂತ್ರ್ಯ ಇದ್ದಾರೆ. ಇದಕ್ಕೆ ನಮ್ಮ ತಕರಾರು ಇಲ್ಲ. ಕಾನೂನು ಹೋರಾಟದ ನೆಪಯಿಟ್ಟುಕೊಂಡು ತನಿಖೆಗೆ ಅಡಿಪಡಿಸುವ ಕೆಲಸ ಮಾಡಬಾರದು ಎಂದರು.

ಶಶಿಕಲಾ ಜೊಲ್ಲೆ ಹಾಗೂ ಕುಮಾರಸ್ವಾಮಿ ವಿರುದ್ಧ ಪ್ರಾಕ್ಯೂಕೇಶನ್ ಗೆ ಅನುಮತಿ ಕೊಟ್ಟಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಆ ಬಗ್ಗೆ ಹೆಚ್ಚಿನ ಮಾಹಿತಿಯಿಲ್ಲ. ಆದರೆ ಅವರ ತಪ್ಪು ಮಾಡಿದರೇ ಇದೀಗ ಸಿದ್ದರಾಮಯ್ಯ ಅವರದ್ದೇ ಸರ್ಕಾರ ಇದೆ ಅವರು ಕೋರ್ಟ್’ಗೆ ಹೋಗಲಿ ಎಂದರು.

ಸಾರ್ವಜನಿಕ ಬದುಕಿನಲ್ಲಿ ಎಲ್ಲರೂ ಕಾನೂನನ್ನು ಗೌರವಿಸಬೇಕು. ಜನರ ಆರ್ಶೀವಾದದಿಂದ ಬಂದ ಕಾರಣ ಅವರ ಹಂಗಿನಲ್ಲಿರಬೇಕಾಗುತ್ತದೆ. ಇದೀಗ ತನಿಖೆಗೆ ಕೊಡಲಾಗಿದೆ. ಇದನ್ನು ರಾಜಕೀಯಗೊಳಿಸಬಾರದು. ಪ್ರತಿಭಟನೆ ಮಾಡುವ ಅಗತ್ಯತೆ ಏನಿಲ್ಲ. ಸಿದ್ದರಾಮಯ್ಯ ದುಸ್ಸಾಹಸ ಬಿಟ್ಟು ತನಿಖೆಗೆ ಸಹಕಾರ ನೀಡಬೇಕು ಎಂದರು.

ಯಾವುದೇ ಕಾರಣಕ್ಕೂ ಬಿಜೆಪಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ, ಅಸ್ಥಿರಗೊಳಿಸುವ ಕೆಲಸ ಮಾಡುವುದಿಲ್ಲ. ಐದು ವರ್ಷ ಅಧಿಕಾರ ನಡೆಸಲು ಜನರು ಜನಾದೇಶ ಕೊಟ್ಟಿದ್ದಾರೆ. ಅವರು ಐದು ವರ್ಷ ಸಂಪೂರ್ಣ ಅಧಿಕಾರ ನಡೆಸಲಿ ಎಂಬುದೇ ನಮ್ಮ ಆಶಯ ಎಂದರು.

ರಾಜ್ಯಪಾಲರು ಬಿಜೆಪಿ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಜೋಶಿ, ಈ ಹಿಂದೆ ಹಂಸರಾಜ್ ಭಾರದ್ವಾಜ್ ಏನೂ ಮಾಡಿದ್ದಾರೆ. ಆಗ ಯಡಿಯೂರಪ್ಪ ಅವರ ಮೇಲೆ ಪ್ರಾಸಿಕ್ಯೂಷನ್ ಜಾರಿ ಮಾಡಿ ಕಾಂಗ್ರೆಸ್ ಏಜೆಂಟ್ ರಂತೆ ವರ್ತನೆ ಮಾಡಿದ್ದರು. ಆದರೂ ಸಹ ನಾವು ಎಂದೂ ಕಾಂಗ್ರೆಸ್ ಏಜೆಂಟ್ ಎಂದು ಆರೋಪ ಮಾಡಿರಲಿಲ್ಲ. ಆಗ ಯಡಿಯೂರಪ್ಪ ನೈತಿಕ ಹೊಣೆಹೊತ್ತು ರಾಜೀನಾಮೆ ಕೊಟ್ಟಿದ್ದರು. ಅದರಂತೆ ಇದೀಗ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಬಿಜೆಪಿಯಲ್ಲಿ ಯಾವುದೇ ಆಂತರಿಕ ಬೇಗುದಿಯಿಲ್ಲ. ಬಸನಗೌಡ ಪಾಟೀಲ್ ಯತ್ನಾಳ ಅವರೇ ಈ ಬಗ್ಗೆ ಪ್ರತಿಕ್ರಿಯೆ ನೀಡಿ ಅಸಮಾಧಾನ ಇಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಹೆಚ್ಚು ಹೇಳುವುದಿಲ್ಲ ಎಂದರು.

Share News

About Shaikh BigTv

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *