ಚಿತ್ರದುರ್ಗ: ಸಿಡಿಲು ಬಡಿದು ಬರೋಬ್ಬರಿ 106 ಕುರಿಗಳು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದ ಬಳಿ ನಿನ್ನೆ(ಶುಕ್ರವಾರ) ನಡೆದಿದೆ.
ಕುರಿಗಳ ಮಾರಣಹೋಮದಿಂದ ಕುರಿಗಾಹಿಗಳು ಲಕ್ಷಾಂತರ ರೂ. ನಷ್ಟಕ್ಕೆ ಸಿಲುಕಿದ್ದಾರೆ. ಕಳೆದ ರಾತ್ರಿ ಜಾಜೂರು ಭಾಗದಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಈ ವೇಳೆ ಸಿಡಿಲು ಬಡಿದು 106 ಕುರಿಗಳು ಸಾವನ್ನಪ್ಪಿವೆ. ಪರಶುರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

