Breaking News

ಸಿದ್ದರಾಮಯ್ಯ ರಾಜೀನಾಮೆ ಕೊಡುವ ಮಾತೇ ಇಲ್ಲಾ : ಡಿಕೆಶಿ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿಯನ್ನು ರಾಜ್ಯಪಾಲರು ನೀಡಿದ್ದಾರೆ. ಥಾವರಚಂದ ಗೆಹ್ಲೋಟ್ ನಡೆ ರಾಜ್ಯ ರಾಜಕೀಯದಲ್ಲಿ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ.

ಶನಿವಾರ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ.

ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿದರು. ಬಳಿಕ ವಿಧಾನಸೌಧದಲ್ಲಿ ಸಚಿವರ ಜೊತೆ ಪತ್ರಿಕಾಗೋಷ್ಠಿಯನ್ನು ನಡೆಸಿದರು. “ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿಯೂ ನಾವು ಹೋರಾಟ ಮಾಡುತ್ತೇವೆ. ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದರು.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *