Breaking News

ಪಿಎಸ್‌ಐ ಸಾವು: ಸಿಐಡಿಯಿಂದ ತನಿಖೆ ಮತ್ತಷ್ಟು ಚುರುಕು

ಯಾದಗಿರಿ: ಪಿಎಸ್‌ಐ ಪರಶುರಾಮ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯಿಂದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಸದ್ಯ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ತಂಡ​ ಯಾದಗಿರಿಗೆ ಭೇಟಿ ನೀಡಿದ್ದು, ಪರಶುರಾಮ ಸಾವಿನ ಬಗ್ಗೆ ಇಂಚಿಂಚು ಮಾಹಿತಿ ಪಡೆಯುತ್ತಿದ್ದಾರೆ. ನಗರದ ಎಸ್​ಪಿ ಕಚೇರಿ ಹಿಂಭಾಗದ ಪೊಲೀಸ್ ವಸತಿ ಗೃಹದಲ್ಲಿರುವ ಪರಶುರಾಮ ಮನೆಯನ್ನು ಪರಿಶೀಲನೆ ಮಾಡಿದ್ದಾರೆ.

ಪರಶುರಾಮ ಮನೆಯ ಯಾವ ಕೊಣೆಯಲ್ಲಿ ಮೃತಪಟ್ಟಿದ್ದ ಸೇರಿ ಅಗತ್ಯ ಮಾಹಿತಿಯನ್ನು ಮಾವ ವೆಂಕಟಸ್ವಾಮಿಯಿಂದ ಪಡೆದುಕೊಂಡಿದ್ದಾರೆ. ಮನೆಯ ಎಲ್ಲಾ ಕೊಣೆ ಪರಿಶೀಲನೆ ಮಾಡಿದ್ದಾರೆ. ನಂತರ ಎಸ್​​​ಪಿ ಕಚೇರಿಗೆ ತೆರಳಿ ಪರಿಶೀಲಿಸಿದ್ದಾರೆ. ಸಾಯುವ ಮುನ್ನ ಪರಶುರಾಮ ಯಾರನ್ನು ಭೇಟಿ ಮಾಡಿದ್ದರು ಎಂಬ ಹಲವು ವಿಚಾರಗಳ ಬಗ್ಗೆ ಸಿಐಡಿ ತನಿಖಾಧಿಕಾರಿಗಳು ಹಾಗೂ ಯಾದಗಿರಿ ಪೊಲೀಸ್ ಅಧಿಕಾರಿಗಳಿಂದ ಎಡಿಜಿಪಿ ಅಗತ್ಯ ಮಾಹಿತಿ ಕಲೆ ಹಾಕಿದ್ದಾರೆ.

ಇನ್ನು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪ ಹೊತ್ತಿರುವ ಕಾಂಗ್ರೆಸ್ ಶಾಸಕರಾದ ಚೆನ್ನರೆಡ್ಡಿ ಪಾಟೀಲ್ ಹಾಗೂ ಪುತ್ರ ಪಂಪನಗೌಡ ನನ್ನ ಪತಿಗೆ ಸಾವಿಗೆ ಇವರೆ ಕಾರಣ ಎಂದು ದೂರು ಸಲ್ಲಿಸಿದ್ದಾರೆ.ಕೇಸ್‌ ದಾಖಲಾಗುತ್ತಿದ್ದಂತೆ ಮೊಬೈಲ್‌ ಸ್ವಿಚ್ಡ್ ಆಫ್‌ ಮಾಡಿಕೊಂಡು ನಾಪತ್ತೆ ಆಗಿರುವ ತಂದೆ ಮಗ ಪತ್ತೆ ಆಗಿಲ್ಲ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *