ಗದಗ: ಗದಗನಿಂದ ಮುಂಡರಗಿ ಹೊರಟಿದ್ದ ಬಸ್ ಹಾಗೂ ಕೊಪ್ಪಳದಿಂದ ಗದುಗಿಗೆ ಬರುತ್ತಿದ್ದ ಎರಡು ಬಸ್ಗಳ ಈ ಅಪಘಾತ ಸಂಭವಿಸಿದೆ. 20 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನೆಯಲ್ಲಿ 5 ಜನರಿಗೆ ಗಂಭೀರವಾಗಿ ಗಾಯಗಳಾಗಿವೆ.
ಗದಗನಿಂದ ಮುಂಡರಗಿಗೆ ತೆರಳುತ್ತಿದ್ದ ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನುವ ಮಾಹಿತಿ ಸ್ಥಳದಲ್ಲಿದ್ದ ಹಲವರಿಂದ ಕೇಳಿ ಬಂದಿದ್ದು, ಕೊಪ್ಪಳದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಬಸ್ ಗಮನಿಸದೇ ರಸ್ತೆ ಕ್ರಾಸ್ ಮಾಡುವ ವೇಳೆಯಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 5 ಜನರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಇನ್ನುಳಿದ 20 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗದಗನಿಂದ ಮುಂಡರಗಿಗೆ ತೆರಳುವ ವಾಹನಗಳು ರಾಷ್ಟ್ರೀಯ ಹೆದ್ದಾರಿಯನ್ನು ಕ್ರಾಸ್ ಮಾಡಿ ತೆರಳಬೇಕಾದ ಅನಿವಾರ್ಯತೆ ಇದೆ. ಈ ಸ್ಥಳದಲ್ಲಿ ಈಗಾಗಲೇ ಹಲವಾರು ಬಾರಿ ಗಂಭೀರ ಸ್ವರೂಪದ ಅಪಘಾತಗಳು ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಅಗತ್ಯ ಕ್ರಮ ತೆಗೆದುಕೊಳ್ಳುತ್ತಿಲ್ಲ ಎನ್ನುವುದು ಸಾರ್ವಜನಿಕರ ಆರೋಪವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

